ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ ಸಧ್ಯಕ್ಕೆ ಕಟೀಲ್ ಇದ್ದಾರೆ ಸೋಮಣ್ಣನ ಹೇಳಿಕೆ ನನಿಗೆ ಗೊತ್ತಿಲ್ಲ ಎಂದು ಆರ್ ಅಶೋಕ್ ಹೇಳಿದರು.
ಇದನ್ನೂ ಓದಿ; ಚಿಕ್ಕಮಗಳೂರು: ಬಿಜೆಪಿ ಮುಖಂಡ ಅನ್ವರ್ ಹತ್ಯೆ ಪ್ರಕರಣ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮಣ್ಣನ ಹೇಳಿಕೆ ನನಿಗೆ ಗೊತ್ತಿಲ್ಲ ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ರಾಜ್ಯಾಧ್ಯಕ್ಷರ ಬಗ್ಗೆ ನನ್ನ ಹತ್ತಿರ ಯಾವುದೇ ಮಾಹಿತಿ ಇಲ್ಲ. ಬಳ್ಳಾರಿಯಲ್ಲಿ ಏನೂ ಮಾತನಾಡಿದರೋ ನನಿಗೆ ಗೊತ್ತಿಲ್ಲ ಎಂದರು.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ -23.06.2023
ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ? ಪಾರ್ಲಿಮೆಂಟ್ ಚುನಾವಣೆಯಿದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿಯರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ತೀರ್ಥಹಳ್ಳಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
- ಕಾರು ಹಾಗೂ ಮಿನಿ ಕ್ಯಾಂಟರ್ ವಾಹನದ ನಡುವೆ ಅಪಘಾತ
- ಚಿಕ್ಕಮಗಳೂರು: ನಿಧಿಗಾಗಿ ಮಧ್ಯರಾತ್ರಿ 25 ಅಡಿ ಆಳದ ಗುಂಡಿ ತೆಗೆದ ದುಷ್ಕರ್ಮಿಗಳು
ಚಿಕ್ಕಮಗಳೂರು: ಬಿಜೆಪಿ ಮುಖಂಡ ಅನ್ವರ್ ಹತ್ಯೆ ಪ್ರಕರಣ; ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 5 ವರ್ಷದ ಹಿಂದೆ ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಆರೋಪಿಗಳು ಪತ್ತೆಯಾಗದೆ ಹಿನ್ನಲೆಯಲ್ಲಿ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ; ಬಾಳೆಹೊನ್ನೂರು: ಫೇಸ್ಬುಕ್ ನಲ್ಲಿ ಸಿಎಂ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಆರೋಪ; ಕೇಸ್ ದಾಖಲು
ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಿ.ಟಿ ರವಿ ಆಪ್ತನಾಗಿದ್ದ ಅನ್ವರ್ ನನ್ನು ನಗರದ ಗೌರಿ ಕಾಲುವೆ ಬಳಿ ಚಾಕುವಿನಿಂದ 13 ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ನಂತರ ಬಿಜೆಪಿ ಸರ್ಕಾರ ಇದ್ದಾಗಲೂ ಸರಿಯಾದ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ತೀರ್ಥಹಳ್ಳಿ: ವಿಧ್ಯಾರ್ಥಿನಿಯ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ; ಪ್ರತಿಭಟನೆ
ಅನ್ವರ್ ಹತ್ಯೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಐಡಿಗೆ ಒಪ್ಪಿಸಿದ್ದರು. 5 ವರ್ಷವಾದರೂ ಹಂತಕರನ್ನು ಬಂಧಿಸಿಲ್ಲ. ಹಾಗಾಗಿ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.