ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆರೆ ನೀರು ಕಲುಷಿತಗೊಂಡ ಹಿನ್ನೆಲೆ ಸಾವಿರಾರು ಮೀನುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಜೋಡಿಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆರೆ ನೀರು ಕಲುಷಿತಗೊಂಡಿದ್ದೋ, ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನ್ನಪ್ಪಿಯೋ ಎಂಬುದು ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದಾಗಿ ತಿಳಿದು ಬಂದಿದೆ.
ಜೋಡಿ ಲಿಂಗದಹಳ್ಳಿಯ ನೂರಾರು ರೈತರು ಇದೇ ಕೆರೆ ನೀರನ್ನ ಉಪಯೋಗಿಸುತ್ತಿದ್ದಾರೆ. ಸುಮಾರು 57 ಎಕರೆಯನ್ನು ಮೀನು ಸಾಕಾಣಿಕೆಗೆ ಗುತ್ತಿಗೆ ಪಡೆದು ಒಂದು ಲಕ್ಷಕ್ಕೂ ಅಧಿಕ ಮೀನುಗಳನ್ನ ಕೆರೆಗೆ ಬಿಡಲಾಗಿತ್ತು. ಜಾನುವಾರಗಳು ಹಾಗೂ ಹಳ್ಳಿಗರು ನಿತ್ಯ ಉಪಯೋಗಕ್ಕೆ ಇದೇ ನೀರನ್ನು ಬಳಸುತ್ತಿದ್ದು, ಇದೀಗ ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಆತಂಕ ಕಾಡುತ್ತಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಕೆರೆಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Previous Post: ಶೃಂಗೇರಿಯ ಪ್ರತಿಮಾಗೆ ಮೊದಲ ರ್ಯಾಂಕ್
ಶೃಂಗೇರಿಯ ಶ್ರೀ ಜೆಸಿಬಿಎಂ ಕಾಲೇಜಿನ ಲೈಬ್ರರಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಮಾ ಪ್ರಶಾಂತ್ ಅವರು ಮಾಸ್ಟರ್ ಆಫ್ ಲೈಬ್ರರಿ & ಇನ್ಫರ್ಮೇಷನ್ ಸೈನ್ಸ್ ನಲ್ಲಿ ಮೊದಲನೇ ರ್ಯಾಂಕ್ ಪಡೆದಿದ್ದಾರೆ.
ದಿನಾಂಕ 02.07.2023ರಂದು ನಡೆದ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಮಾ ಅವರಿಗೆ ಗೋಲ್ಡ್ ಮೆಡಲ್’ನ್ನು ನೀಡಿ ಪ್ರಶಂಸಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪೀರಿಯಡ್ಸ್ ಆಗಿರೋ ಡಾಕ್ಟರ್ ಹತ್ರ ಸರ್ಜರಿ ಮಾಡಿಸಿಕೊಳ್ತೀರಾ ಇಲ್ವಾ?’
- ಒಂದೇ ದಿನ ನೂರಾರು ಫುಲ್ ಹೆಲ್ಮೇಟ್ ಕಳ್ಳತನ
- ಏರುತ್ತಿದೆ ಕಾಫಿ ಬೆಲೆ, ಬೆಳೆಗಾರರಿಗೆ ಸಿಹಿ ಸುದ್ದಿ, ಗ್ರಾಹಕರಿಗೆ ಕಹಿ ಸುದ್ದಿ
ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಊರಿನ ಕೀರ್ತಿಯನ್ನು ಹೆಚ್ಚಿಸಿದ್ದು ಸಾರ್ವಜನಿಕರಿಂದ ಅಭಿನಂದನೆ ವ್ಯಕ್ತವಾಗಿದೆ.