ಟೋಕಿಯೊ: ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುರವರ ಗೆಲುವಿನ ನಾಗಾಲೋಟ ಮುಂದುವರೆದಿದೆ, ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ರೋಚಕ ಜಯವನ್ನು ಸಾಧಿಸಿದ್ದಾರೆ.
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಪೈನಲ್ ಪಂದ್ಯದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯವನ್ನು ಗಳಿಸಿದ್ದಾರೆ.
ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್ ನ ನಾಲ್ಕನೇ ಶ್ರೇಯಾಂಕದ ಅಕನೆ ಯಮಗುಚಿ ಅವರ ವಿರುದ್ಧ 21-13, 22-20 ಅಂತರದಲ್ಲಿ ಜಯವನ್ನು ಗಳಿಸಿ ಸೆಮಿಫೈನಲ್ ಗೆ ಲಗ್ಗೆಯನ್ನು ಇಟ್ಟಿದ್ದಾರೆ.
ಗುರುವಾರದಂದು ಸಿಂಧುರವರು ಡೆನ್ಮಾರ್ಕ್ ನ ಮಿಯಾ ಬ್ಲಿಚ್‌ಫೆಲ್ಡ್ ರನ್ನು ಸೋಲಿಸಿ ಕ್ವಾರ್ಟರ್ ಫೈನಲ್‌ಗೆ ಏರಿದ್ದರು.