ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ಫೈನಲ್‌ನಲ್ಲಿ ಕುಸ್ತಿಪಟು ರವಿ ದಹಿಯಾರವರು ಆರ್‌ಒಸಿಯ ಜಾವೂರ್ ಉಗೆವ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.
ಇಂದು ಚಿನ್ನಕ್ಕಾಗಿ ನಡೆದ ಸೆಣೆಸಾಟದಲ್ಲಿ ರವಿ ದಹಿಯಾ 4-7 ಅಂಕಗಳೊoದಿಗೆ ಉಗೆವ್ ಗೆ ಶರಣಾಗಿದ್ದಾರೆ.
ಈ ಮೂಲಕ ಭಾರತಕ್ಕೆ ಎರಡು ಬೆಳ್ಳಿ ಪದಕ ಬಂದoತಾಗಿದೆ. ಮೀರಾ ಬಾಯಿ ಚಾನು ಮೊದಲಿಗೆ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಕ್ರೀಡಾಕೂಟದಲ್ಲಿ ಭಾರತ ಎರಡು ಬೆಳ್ಳಿ ಮತ್ತು ಮೂರು ಕಂಚು ಸೇರಿ ಒಟ್ಟು ಐದು ಪದಕಗಳನ್ನು ಗೆದ್ದಂತಾಗಿದೆ.