(traffic-rules:) ಜನರ ಅನುಕೂಲಕ್ಕಾಗಿ ಸಾಕಷ್ಟು ಸಂಚಾರ ನಿಯಮಗಳನ್ನು ಜಾರಿಗೊಳಿಸುತ್ತಲೇ ಇರುತ್ತಾರೆ. ಆದರೆ ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಪೋಲಿಸರ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಇದೀಗ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಹೌದು, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ LED ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಅದರಂತೆ ಕೆಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ರೀತಿ ಇದೀಗ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಸಂಚಾರ ನಿಯಮ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವನಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ ಎಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಲು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಂಗ್ ಸೈಡ್ ಡ್ರೈವಿಂಗ್ ಗಾಗಿ ಎಫ್‌ಐಆರ್ ದಾಖಲಿಸಬೇಕು ಮತ್ತು ಡಿಎಲ್ ವಶಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಬೆಂಗಳೂರು ನಗರ ಸೇರಿದಂತೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪುಟ್ ಪಾತ್ ಮೇಲೆ ಮೋಟಾರು ಸೈಕಲ್‌ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿರುತ್ತದೆ. ಅದಕ್ಕಾಗಿ ಈ ಕುರಿತು ವಿಶೇಷ ಕಾರ್ಯಾಚರಣೆ ಮಾಡುವುದು. ಇದರ ಬಗ್ಗೆ, ಮುಂಚಿತವಾಗಿ ಸಾಮಾಜಿಕ ಜಾಲತಾಣ, ಕರಪತ್ರ ಹಾಗೂ ಧ್ವನಿ ವರ್ದಕ ಉಪಕರಣಗಳ ಮೂಲಕ ತಿಳಿವಳಿಕೆ ನೀಡುವ ಬಗ್ಗೆ ಕ್ರಮ ವಹಿಸಬೇಕು. ಕ್ರಮ ಕೈಗೊಂಡು ಆ. 31 ರೊಳಗಾಗಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






