Trainings: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸಿಹಿಸುದ್ದಿ

(Trainings: ) ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಆಯೋಜಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 13 ದಿನಗಳ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಿದದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?


ಈ ತರಬೇತಿಯೂ ನವೆಂಬರ್ 19 ರಿಂದ ಡಿಸೆಂಬರ್ 02 ವರೆಗೂ ನಡೆಯಲಿದ್ದು, ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ ಏನಿರಬೇಕು?;
* ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.


ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್‌ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ


ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು.


ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್‌ ಹೊಂದಿರುವವರ ಗಮನಕ್ಕೆ;  ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 8105526792, 9241482541 ನ್ನು ಸಂಪರ್ಕಿಸಬಹುದಾಗಿದೆ.

Trainings: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸಿಹಿಸುದ್ದಿ
Trainings: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸಿಹಿಸುದ್ದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು