TV Repair:bpl ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ

(TV Repair) ನಿರುದ್ಯೋಗಿ ಯುವಕ-ಯುವತಿಯರಿಗೆ 30 ದಿನಗಳ ಉಚಿತ ಟಿವಿ ರಿಪೇರಿ ತರಬೇತಿ ಆಯೋಜಿಸಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿಗೆ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ;  ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ


ತರಬೇತಿ ಆರಂಭ ದಿನಾಂಕ:
ಡಿಸೆಂಬರ್‌ 18 ರಿಂದ

* ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು.
* ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು.
* ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.


ಇದನ್ನೂ ಓದಿ;  ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್


ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
* ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ಇದನ್ನೂ ಓದಿ; ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ; ನ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ನವೆಂಬರ್‌ 30 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ.

TV Repair:bpl ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ
TV Repair:bpl ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು