ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದಲ್ಲಿ ಭಾನುವಾರ ನಡೆದಿದೆ. ಯಶವಂತ(10), ರೋಹಿತ್ (6) ಮೃತಪಟ್ಟ ಬಾಲಕರು.
ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ
ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?
ಕುಂಟಿನಮಡು ಗ್ರಾಮ ಸಮೀಪದ ಕೆರೆ ಬಳಿ ಹೋಗಿದ್ದ ಬಾಲಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಶಶಿಧರ ಮತ್ತು ಪುಷ್ಪಾ ದಂಪತಿಯ ಪುತ್ರ ಯಶವಂತ, ಶಶಿಧರ ಅವರ ಸಹೋದರ ಹರೀಶ್ ಮತ್ತು ಸೌಮ್ಯ ದಂಪತಿಯ ಮಗ ರೋಹಿತ್.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೈಟ್ ವಿಚಾರಕ್ಕೆ ಗಲಾಟೆ; ಮಹಿಳೆಗೆ ಚಾಕುವಿನಿಂದ ಹಲ್ಲೆ
- ಉಡುಪಿಯಿಂದ ಮಹಿಳೆ ನಾಪತ್ತೆ: ದೂರು ದಾಖಲು
- ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ
ತಂದೆ ಶಶಿಧರ್ ಅವರು ಎಂದಿನಂತೆ ತೋಟಕ್ಕೆ ತೆರಳಿದ್ದರು. ಈ ವೇಳೆ ಅವರನ್ನೇ ಹಿಂಬಾಲಿಸಿಕೊಂಡು ಐದನೇ ತರಗತಿ ಓದುತ್ತಿದ್ದ ಯಶವಂತ್ ಹಾಗೂ ಈ ವರ್ಷ ಒಂದನೇ ತರಗತಿಗೆ ದಾಖಲಾತಿ ಪಡೆಯಬೇಕಿದ್ದ ರೋಹಿತ್ ಸೈಕಲ್‌ನಲ್ಲಿ ಸಾಗಿದ್ದಾರೆ. ಆದರೆ ಊರಿನ ಹೊರಭಾಗದ ಕೆರೆಯಲ್ಲಿ ಮಕ್ಕಳು ಆಕಸ್ಮಿಕವಾಗಿ ಮುಳುಗಿದ್ದಾರೆ. ಕೆರೆಯಲ್ಲಿ ಮುಳುಗುತ್ತಿರುವ ಮಕ್ಕಳನ್ನು ನೋಡಿದ ಸ್ಥಳೀಯರೊಬ್ಬರು ತಕ್ಷಣ ಗ್ರಾಮಸ್ಥರಿಗೆ ಮಾಹಿತಿ ನೀಡಿ ನೀರಿಗೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದರು.
ಇಬ್ಬರು ಮಕ್ಕಳನ್ನು ಕೆರೆಯಿಂದ ಹೊರ ತೆಗೆಯುವಾಗ ರೋಹಿತ್‌ನ ಉಸಿರು ಅದಾಗಲೇ ನಿಂತಿತ್ತು. ಜೀವಂಶವಾಗಿದ್ದ ಯಶವಂತ್‌ನನ್ನು ಆಸ್ಪತ್ರೆಗೆ ಈ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮಧ್ಯೆ ಆತನೂ ಮೃತಪಟ್ಟಿದ್ದಾನೆ.
ಇದನ್ನೂ ಓದಿ; ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
ಭಾನುವಾರ ಬೆಳಗ್ಗೆಯೇ ಮನೆಯಲ್ಲಿ ಯಶವಂತ್ ಹಾಗೂ ರೋಹಿತ್ ಮೀನು ಸಾಕುವ ಬಗ್ಗೆ ಮಾತನಾಡಿದ್ದರು. ಮೀನನ್ನು ಹಿಡಿದು ತಂದು ಮನೆಯಲ್ಲಿ ಸಾಕುವ ಬಗ್ಗೆ ಮಾತನಾಡಿಕೊಂಡು ತಂದೆಯನ್ನು ಹಿಂಬಾಲಿಸಿಕೊಂಡು ಸೈಕಲ್‌ನಲ್ಲಿ ಕೆರೆಗೆ ತೆರಳಿ ಮೀನು ಹಿಡಿದು ತರುವ ಪ್ರಯತ್ನ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ನಾಲ್ಕು ತಿಂಗಳ ಹಿಂದೆ ರೋಹಿತ್ ತಮ್ಮ ಒಂದೂವರೆ ವರ್ಷದ ಭುವನ್ ಹೊಸದುರ್ಗ ತಾಲ್ಲೂಕಿನ ದೊಡೇನಪಾಳ್ಯದಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ, ಆದಾಗಿ ಕೆಲವೇ ದಿನಗಳ ಅಂತರದಲ್ಲಿ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದರಿಂದ ಕುಟುಂಬದವರ ಆಘಾತಕ್ಕೆ ಒಳಗಾಗಿದ್ದಾರೆ, ಮಕ್ಕಳ ಮೃತದೇಹ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ; ಹಿಟ್ ಅಂಡ್ ರನ್; ತಪ್ಪಿದ ಭಾರಿ ಅನಾಹುತ
ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.
ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.
ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.