ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದ್ವಿಚಕ್ರ ವಾಹನಗಳ ಡಿಕ್ಕಿಯಾಗಿ ಒಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಕ್ರಾಸ್ ಬಳಿ ನಡೆದಿದೆ. ಮಣಿ ಮೃತಪಟ್ಟ ಯುವಕ.
ಇದನ್ನೂ ಓದಿ; ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ
ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಾಳಗುಪ್ಪದಿಂದ ಸಾಗರ ಹೋಗುವ ಮಧ್ಯೆ ಸಂಜೆ ಸುಮಾರು 6:50 ರ ಆಸುಪಾಸು ಹೊತ್ತಿನಲ್ಲಿ ಕಾನ್ಲೆ ಕ್ರಾಸ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಶಿರಸಿ ಕಸ್ತೂರಬಾ ನಗರ ನಿವಾಸಿ ಮಣಿ ಎಂಬ ಯುವಕ ಸ್ಥಳದಲ್ಲೇ ಅಸುನೀಗಿದ್ದಾನೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಗೋ ಪೂಜೆ ಮಾಡಿ ವಿನೂತನ ರೀತಿಯಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ
- ಅಕ್ರಮವಾಗಿ ನಕಲಿ ಖಾತೆ ಸೇರ್ಪಡೆ; ಇಬ್ಬರು ದ್ವಿತೀಯ ದರ್ಜೆ ಸಹಾಯಕರು ಅಮಾನತು
- ಪ್ರಭಾವಿ ಹುದ್ದೆ ಬಳಸಿಕೊಂಡು ಜೀವರಾಜ್ ನಡೆಸಿದ ನಂಜಿನ ರಾಜಕಾರಣದಿಂದಾಗಿ ಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿ ಮಾಡಲಾಗಿರಲಿಲ್ಲ
ಮತ್ತೋರ್ವ ಮಂಜುನಾಥ್ ಎಂಬಾತನಿಗೂ ಗಂಭೀರ ಗಾಯಗಳಾಗಿದ್ದು, ಈತನೂ ಸಹ ಶಿರಸಿ ಮೂಲದ ಕಸ್ತೂರಬಾ ಕೇರಿ ನಿವಾಸಿ ಗಂಭೀರ ಗಾಯಗೊಂಡಿದ್ದಾನೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಆತನನ್ನ ದಾಖಲು ಮಾಡಲಾಗಿದೆ. ಇನ್ನೊರ್ವ ಬೈಕ್ ಸವಾರ ಸಣ್ಣ ಪುಟ್ಟ ಗಾಯಗೊಂಡಿದ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ; ಕುಸಿದು ಬಿದ್ದು ವ್ಯಕ್ತಿ ಸಾವು; ಬ್ಯಾಟರಿ ಲೈಟ್‌ನಲ್ಲಿ ಮರಣೋತ್ತರ ಪರೀಕ್ಷೆ

ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ
ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು
ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು









Leave a Reply