Udupi Chikkamagalur Ticket: ಕೋಟಾಗೆ ಟಿಕೆಟ್ – ಶೋಭಾಗೆ ಕೋಕ್; ಪಕ್ಕಾ ಸುದ್ದಿ ಅಂದ್ರೆ ನ್ಯೂಸ್ ಮಲ್ನಾಡ್

(Udupi Chikkamagalur Ticket) ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಉಡುಪಿ -ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಆಯ್ಕೆ ಫೈನಲ್ ಆಗಿದ್ದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಶೋಭಾ ಕರಂದ್ಲಾಜೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಭ್ಯರ್ಥಿ ಬದಲಾವಣೆಗೆ ಬಿಜೆಪಿ ಮುಂದಾಗಿತ್ತು , ಕೊನೆಯ ಹಂತದ ವರೆಗೂ ಮಾಜಿ ಸಚಿವ ಸಿ.ಟಿ ರವಿ, ಪ್ರಮೋದ್ ಮಧ್ವರಾಜ್ ತೀವ್ರ ಲಾಬಿ ನಡೆಸಿದ್ದರು, ಡಿ.ಎನ್ ಜೀವರಾಜ್ ಸೈಲೆಂಟ್ ಆಗಿ ಇದ್ದರೂ ಸಹ ಆಕಾಂಕ್ಷಿಯಾಗಿದ್ದರು ಆದರೆ ಎಲ್ಲರೂ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಕುರಿತು ನಿನ್ನೆಯೇ ನ್ಯೂಸ್ ಮಲ್ನಾಡ್ ಎಕ್ಸ್ ಕ್ಲೂಸಿವ್ ವರದಿ ಮಾಡಿತ್ತು.


ಇದನ್ನೂ ಓದಿ: ರೈತರಿಗೆ ಭರ್ಜರಿ ಗುಡ್ ನ್ಯೂಸ್..!; ಪಿಎಂ ಕಿಸಾನ್ ಹಣ 2000 ಹಣ ಬಿಡುಗಡೆ.!; ಈ ಕೆಲಸ ತಪ್ಪದೇ ಮಾಡಿ


ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆ ನಡೆಸಿ ಗೋಬ್ಯಾಕ್ ಅಭಿಯಾನ ಮಾಡಿದ್ದ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಎತ್ತಂಗಡಿ ಮಾಡಿ ಬೆಂಗಳೂರು ಉತ್ತರಕ್ಕೆ ಟಿಕೆಟ್ ನೀಡಿದೆ.

Udupi Chikkamagalur Ticket: ಕೋಟಾಗೆ ಟಿಕೆಟ್ - ಶೋಭಾಗೆ ಕೋಕ್; ಪಕ್ಕಾ ಸುದ್ದಿ ಅಂದ್ರೆ ನ್ಯೂಸ್ ಮಲ್ನಾಡ್
Udupi Chikkamagalur Ticket: ಕೋಟಾಗೆ ಟಿಕೆಟ್ – ಶೋಭಾಗೆ ಕೋಕ್; ಪಕ್ಕಾ ಸುದ್ದಿ ಅಂದ್ರೆ ನ್ಯೂಸ್ ಮಲ್ನಾಡ್

ಕೊನೆಗೂ ಈ ಎಲ್ಲಾ ಹೈಡ್ರಾಮಾಗಳಿಗೆ ಬ್ರೇಕ್ ಬಿದ್ದಿದ್ದು ಜಯಪ್ರಕಾಶ್ ಹೆಗ್ಡೆಗೆ ಕೋಟಾ ಶ್ರೀನಿವಾಸ ಪೂಜಾರಿಯೆ ಸೂಕ್ತ ಎದುರಾಳಿ ಎಂದು ಬಿಜೆಪಿ ಭಾವಿಸಿದಂತೆ ಕಾಣುತ್ತಿದೆ. ಈ ಬಗ್ಗೆ ನ್ಯೂಸ್ ಮಲ್ನಾಡ್ ನೆನ್ನೆಯೇ Exclusive ಮಾಹಿತಿಯನ್ನು ಹೊರಹಾಕಿತ್ತು.


ಇದನ್ನೂ ಓದಿ: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಯುಕೆ-ಇಂಡಿಯಾ ಟೋಫಲ್ ನಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಯಾರಿಗೆ ಟಿಕೆಟ್ ಘೋಷಣೆ..?

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಈ ಬಾರಿ ಯಾರಿಗೆ ಶಾಕ್‌?

ಬಿಜೆಪಿಯ 9 ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ನಳಿನ್ ಕುಮಾರ್‌ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್‌ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್‌ ಪ್ರಸಾದ್‌, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್‌ ಬಸವರಾಜ್‌ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ