ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಈವರೆಗೂ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿ: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ ಪಿ ಕುಮಾರಸ್ವಾಮಿ
ನಿನ್ನೆ ಚಿಕ್ಕಮಗಳೂರು ಜಿಲ್ಲೆಯ 4 ಕಡೆಗಳಲ್ಲಿ ಅಕ್ರಮ ಹಣ ಹಾಗೂ ಜೆಲಟಿನ್ ಜೆಲ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಂಬಿಹಳ್ಳಿಯಲ್ಲಿ ಸಫ್ರೈಸ್ ಚೆಕ್ ಪೋಸ್ಟ್ ನಲ್ಲಿ 1,80,000 ನಗದು ವಶಕ್ಕೆ:
ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 1,80,000 ನಗದು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಂಬಿಹಳ್ಳಿಯಲ್ಲಿ ಸಫ್ರೈಸ್ ಚೆಕ್ ಪೋಸ್ಟ್ ಬಳಿ ನಡೆದಿದೆ.
ಇದನ್ನು ಓದಿ: ಮೂಡಿಗೆರೆ ಬಿಜೆಪಿ ಅಭ್ಯರ್ಥಿಯಾಗಿ ದೀಪಕ್ ದೊಡ್ಡಯ್ಯ ಕಣಕ್ಕೆ
ಹಿರೇಗರ್ಜೆಯಲ್ಲಿ ಸಫ್ರೈಸ್ ಚೆಕ್ ಪೋಸ್ಟ್ ನಲ್ಲಿ 90,000 ಜಪ್ತಿ:
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 90,000 ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹಿರೇಗರ್ಜೆಯಲ್ಲಿ ಸಫ್ರೈಸ್ ಚೆಕ್ ಪೋಸ್ಟ್ ಬಳಿ ನಡೆದಿದೆ.
25 ಕೆ.ಜಿ. ಜೆಲಟಿನ್ ಜೆಲ್ ಕಡ್ಡಿ ವಶಕ್ಕೆ:
ಕಡೂರು ಪಟ್ಟಣದ ಮರವಂಜಿ ವೃತ್ತದಲ್ಲಿ ಸಫ್ರೈಸ್ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 25 ಕೆ.ಜಿ. ಜೆಲಟಿನ್ ಜೆಲ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ ಸ್ಪೆಕ್ಟರ್
ಡಿಸಿಸಿ ಬ್ಯಾಂಕ್ ಸಿಬ್ಬಂದಿಯಿಂದ 40 ಲಕ್ಷ ವಶಕ್ಕೆ:
SLBC (State Level Bankers’ Committee) ನಿಗದಿಪಡಿಸಿದ SOP(Standard Operating Procedure) ಗಳನ್ನು ಅನುಸರಿಸದಿದ್ದಕ್ಕಾಗಿ ಡಿಸಿಸಿ ಬ್ಯಾಂಕ್ ಸಿಬ್ಬಂದಿಯವರು 40 ಲಕ್ಷ ನಗದನ್ನು ಸಾಗಿಸುತ್ತಿರುವಾಗ ಚೌಳಹಿರಿಯೂರು ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿ: ಮೊದಲ ಹಂತದಲ್ಲಿ 189 ಜನರ ಪಟ್ಟಿ ಘೋಷಿಸಿದ ಬಿಜೆಪಿ!