ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಚಾರಣಕ್ಕೆ ಹೆಸರುವಾಸಿಯಾಗಿರುವ ಸ್ಥಳವಾದ ದೇವರು ಮನೆ ಗುಡ್ಡದ ಸಮೀಪದ ರಸ್ತೆ, ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಗುರುತು ಸಿಗದ ಸ್ಥಿತಿಯಲ್ಲಿ ಶವ ದೊರಕಿದೆ. ಯುವಕರನ್ನು ಕೊಲೆ ಮಾಡಿ ಈ ಸ್ಥಳಕ್ಕೆ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಶವವನ್ನು ನೋಡಿದ ಪ್ರವಾಸಿಗರು ಪೊಲೀಸರಿಗೆ ಈ ಸಂಬಂಧ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ.
ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿರುವ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವಾರು ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿದ್ದವು. ಘಟನಾ ಸಂಬಂಧ ಪರಿಶೀಲನೆ ಆರಂಭಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಆರಂಭಿಸಿದ್ದಾರೆ.
– ತನು ಕೊಟ್ಟಿಗೆಹಾರ, ವರದಿಗಾರರು
ಶಿವಮೊಗ್ಗ: ನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ
ಶಿವಮೊಗ್ಗ: ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.
ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.