Monday, December 11, 2023
Homeವಿಶೇಷನಿಮ್ಮ ಆಧಾರ್ ವಿವರಗಳನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಇಂದೇ ಕೊನೆ ದಿನ | ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ವಿವರಗಳನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಇಂದೇ ಕೊನೆ ದಿನ | ಇಲ್ಲಿದೆ ಮಾಹಿತಿ

ಉಚಿತ ಆಧಾರ್ ಕಾರ್ಡ್(aadhaar card) ನವೀಕರಣದ ಗಡುವು ಇಂದು ಕೊನೆಗೊಳ್ಳುತ್ತದೆ. ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್(update) ಮಾಡಬೇಕು ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿತ್ತು. ಜೂನ್ 14 ರೊಳಗೆ ನನ್ನ ಆಧಾರ್ ಪೋರ್ಟಲ್‌ನಲ್ಲಿ ವಿವರಗಳನ್ನು ಉಚಿತವಾಗಿ ನವೀಕರಿಸಲು ತಿಳಿಸಿತ್ತು

ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ಠಾಣೆಗೆ ಹೈಟೆಕ್ ರೂಪ ಕೊಟ್ಟ ಪಿ.ಎಸ್.ಐ ಪವನ್

ಆಧಾರ್ ಕಾರ್ಡ್ನಲ್ಲಿರುವ ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಫೋನ್ ಸಂಖ್ಯೆ, ಇ-ಮೇಲ್ ಅನ್ನು ಉಚಿತವಾಗಿ ನವೀಕರಿಸಬಹುದು. ಫೋಟೋ, ಐರಿಸ್ ಮತ್ತು ಬಯೋಮೆಟ್ರಿಕ್ ವಿವರಗಳಿಗಾಗಿ ಆಧಾರ್ ಕೇಂದ್ರದಲ್ಲಿ 50 ರೂ. ಶುಲ್ಕ ಪಾವತಿಸಿ ನವೀಕರಿಸಬೇಕು.

ಇದನ್ನೂ ಓದಿ; ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ

ಆಧಾರ್ ಕಾರ್ಡ್ ವಿತರಿಸಿ ಹತ್ತು ವರ್ಷಗಳಾಗಿವೆ. ಕಳೆದ ಹತ್ತು ವರ್ಷಗಳಿಂದ ಅನೇಕ ಜನರು ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಿಲ್ಲ. ಅವರ ವಿಳಾಸಗಳು ಬದಲಾದರೂ, ಅವರು ಆಧಾರ್‌ನಲ್ಲಿರುವ ಹಳೆಯ ವಿಳಾಸಗಳನ್ನು ಬಳಸುತ್ತಾರೆ. ಅದಕ್ಕಾಗಿಯೇ ಕೇಂದ್ರವು ಆಧಾರ್ ಕಾರ್ಡ್ ನವೀಕರಣವನ್ನು ಕಡ್ಡಾಯಗೊಳಿಸಿದೆ.

ಆನ್‌ಲೈನ್ ನವೀಕರಣಗಳನ್ನು ಉಚಿತವಾಗಿ ನೀಡಲಾಗುತ್ತದೆ. ಇದನ್ನು https://myaadhaar.uidai.gov.in ನಲ್ಲಿ ಉಚಿತವಾಗಿ ನವೀಕರಿಸಬಹುದು. ಆಧಾರ್ ಸೇವಾ ಕೇಂದ್ರಗಳಲ್ಲಿ ಕಡ್ಡಾಯವಾಗಿ 50 ರೂ. ಪಾವತಿಸಿ ನವೀಕರಿಸಬಹುದು. ಇದು ಇಂದೆ ಕೊನೆಯ ದಿನಾಂಕವಾಗಿದೆ ಮರೆಯಬೇಡಿ.

ನಿಮ್ಮ ಆಧಾರ್ ಕಾರ್ಡ್ ಹೆಸರು, ವಿಳಾಸ, ಹುಟ್ಟಿದ ದಿನಾಂಕವನ್ನು ಉಚಿತವಾಗಿ ಬದಲಾಯಿಸುವುದು ಹೇಗೆ?:
ಹಂತ 1- ನಿಮ್ಮ ಆಧಾರ್ ವಿವರಗಳನ್ನು ಆನ್‌ಲೈನ್‌ನಲ್ಲಿ ನವೀಕರಿಸಲು https://myaadhaar.uidai.gov.in ತೆರೆಯಿರಿ
ಹಂತ 2- ಆಧಾರ್ ಸಂಖ್ಯೆ ನಮೂದಿಸಿ ಮತ್ತು ಲಾಗಿನ್ ಮಾಡಿ.
ಹಂತ 3- ಆನ್‌ಲೈನ್ ಅಪ್‌ಡೇಟ್ ಸೇವೆಗಳ ಮೇಲೆ ಕ್ಲಿಕ್ ಮಾಡಿ.
ಹಂತ 4- ಅದರ ನಂತರ ಅಪ್‌ಡೇಟ್ ಆಧಾರ್ ಆನ್‌ಲೈನ್ ಮೇಲೆ ಕ್ಲಿಕ್ ಮಾಡಿ.
ಹಂತ 5- ಆಧಾರ್ ಅಪ್‌ಡೇಟ್ ಮಾಡಲು ಮುಂದುವರೆಯಿರಿ ಮೇಲೆ ಕ್ಲಿಕ್ ಮಾಡಿ.
ಹಂತ 6- ಹೆಸರು, ಲಿಂಗ, ಹುಟ್ಟಿದ ದಿನಾಂಕ, ವಿಳಾಸ ಆಯ್ಕೆಗಳಲ್ಲಿ ನೀವು ನವೀಕರಿಸಲು ಬಯಸುವ ಆಯ್ಕೆಯನ್ನು ಆಯ್ಕೆಮಾಡಿ.
ಹಂತ 7- ನಿಮ್ಮ ವಿವರಗಳನ್ನು ನವೀಕರಿಸಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಹಂತ 8- ಯಾವುದೇ ಪಾವತಿ ಅಗತ್ಯವಿಲ್ಲದೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ನಿಮಗೆ ನೋಂದಾಯಿಸಲಾದ ಮೊಬೈಲ್ ಗೆ SMS ರೂಪದಲ್ಲಿ ನವೀಕರಣ ವಿನಂತಿ ಸಂಖ್ಯೆಯನ್ನು ನೀವು ಸ್ವೀಕರಿಸುತ್ತೀರಿ. URN ಸಂಖ್ಯೆಯೊಂದಿಗೆ ನಿಮ್ಮ ಆಧಾರ್ ನವೀಕರಣ ಸ್ಥಿತಿಯನ್ನು ನೀವು ಪರಿಶೀಲಿಸಬಹುದು.

ಉಚಿತ ವಿದ್ಯುತ್ ಯೋಜನೆಯನ್ನು ಪಡೆಯಲು ಏನು ಮಾಡಬೇಕು? | 12 ತಿಂಗಳು ಬಳಸಿದ ವಿದ್ಯುತ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ್ ವಿದ್ಯುತ್ ನೀಡುವುದಾಗಿ ಘೋಷನೆ ಮಾಡಿದೆ. ಜನರಲ್ಲಿ ಕೆಲವು ಗೊಂದಲಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಈ ಯೋಜನೆಗೆ ಎಲ್ಲರೂ ಅರ್ಹವೇ?
ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಈ ಯೋಜನೆಯನ್ನು ಪಡೆಯಲು ಏನು ಮಾಡಬೇಕು? ಎಲ್ಲಿ ಪಡೆಯಬಹುದು?
ಈ ಯೋಜನೆಯನ್ನು ಪಡೆಯಲು ಪ್ರತಿ ಗೃಹಬಳಕೆ ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ಲಿಂಕ್‌ನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುತ್ತದೆ ಹಾಗೂ ನೋಂದಣಿ ಜೂನ್ 15 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ; ಕೇಂದ್ರದ ಯೋಜನೆ ಜೊತೆಗೆ ಹೆಜ್ಜೆ ಹಾಕಿ; ಶೋಭಾ ಕರಂದ್ಲಾಜೆ

ಈ ಯೋಜನೆಯನ್ನು ಯಾವಾಗಿನಿಂದ ಜಾರಿಗೆ ತರಲಾಗುತ್ತದೆ?
2023ರ ಜುಲೈನಲ್ಲಿ ಬಳಸಿದ ವಿದ್ಯುತ್ ಬಳಕೆಯನ್ನು, 2023ರ ಆಗಸ್ಟ್ ನಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಈ ಯೋಜನೆಯನ್ನು ಆಫ್‌ಲೈನ್ ಮೂಲಕ ಪಡೆಯಬಹುದೇ?
ಹೌದು, ಎಲ್ಲಾ ಗೃಹಬಳಕೆ ಗ್ರಾಹಕರಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು

ಈ ಯೋಜನೆ ಪಡೆಯಲು ಯಾವುದೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು?
ಆಧಾರ್ ಸಂಖ್ಯೆ, ವಿದ್ಯುತ್ ಬಿಲ್‌ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರ (ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ id ಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಸುವಾಗ ಶುಲ್ಕ ಪಾವತಿಸಬೇಕೆ?
ಈ ಯೋಜನೆಯಡಿಯಲ್ಲಿ ಯಾವುದೇ ಶುಲ್ಕವನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಪಾವತಿಸಬೇಕಾಗಿರುವುದಿಲ್ಲ.

ಇದನ್ನೂ ಓದಿ; ಸಿಡಿಲು ಬಡಿದು ಓರ್ವ ಯುವಕ ಸಾವು, ನಾಲ್ವರಿಗೆ ಸಣ್ಣಪುಟ್ಟ ಗಾಯ

ಜೂನ್ ತಿಂಗಳ ವಿದ್ಯುತ್ ಬಿಲ್‌ನ್ನು ಪಾವತಿಸಬೇಕೆ?
ಹೌದು, ಈ ಯೋಜನೆಯು 2023 ರ ಜುಲೈ ವಿದ್ಯುತ್ ಬಳಕೆಗೆ ಅನ್ವಯಿಸಲಿದ್ದು, 2023 ರ ಆಗಸ್ಟ್ 1ನೇ ಹಾಗೂ ನಂತರದ ಮಾಪಕ ಓದುವ ದಿನಾಂಕದಿಂದ ಅನ್ವಯಿಸುತ್ತದೆ.

ಒಂದಕ್ಕಿಕತ ಹೆಚ್ಚು ವಿದ್ಯುತ್ ಮಾಪಕಗಳಿದ್ದರೆ, ಈ ಯೋಜನೆಗೆ ಅರ್ಹವೇ?
ಇಲ್ಲ, ಪ್ರತಿ ಗ್ರಾಹಕರು ಒಂದು ಮೀಟರ್‌ಗೆ ಮಾತ್ರ ಈ ಯೋಜನೆಯಡಿ ಅರ್ಹರಾಗಿರುತ್ತಾರೆ.

ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

ಅರ್ಜಿ ಸಲ್ಲಿಸಿದ ನಂತರ ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
ಹೌದು, ಸೇವಾ ಸಿಂಧುವಿನಿಂದ ಸ್ವೀಕೃತಿ ಸಂದೇಶವನ್ನು ನೋಂದಾಯಿತ ಗ್ರಾಹಕರಿಗೆ ಇಮೇಲ್ ಅಥವಾ sms ಮೂಲಕ ಕಳುಹಿಸಲಾಗುತ್ತದೆ.

ಅಪಾರ್ಟೆಂಟ್ (ವಸತಿ ಸಮುಚ್ಚಯ) ಮಾಲೀಕನಾಗಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದೇ?
ಹೌದು, ಪ್ರತ್ಯೇಕ ವಿದ್ಯುತ್ ಮೀಟರ್‌ಗಳು ಲಭ್ಯವಿದ್ದರೆ ಅಥವಾ ಸ್ಥಾಪಿಸಿದ್ದರೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ಆತ ಯಾರು?

ಬಾಡಿಗೆದಾರರನಾಗಿದ್ದು, ಬಿಲ್ ಮಾಲೀಕರ ಹೆಸರಿನಲ್ಲಿದೆ. ಈ ಯೋಜನೆ ಅನ್ವಯವಾಗುವುದೇ?
ಹೌದು, ಅಧಾರ್ ಸಂಖ್ಯೆ, ಬಿಲ್‌ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ ಭೋಗ್ಯದ ಕರಾರು ಪತ್ರ (ಬಾಡಿಗೆಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ id ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.

ಯೋಜನೆಯ ಅಡಿಯಲ್ಲಿ ಬಾಡಿಗೆ/ಭೋಗ್ಯದಾರನಾಗಿ ನೋಂದಾಯಿಸಲು ಸಲ್ಲಿಸಬೇಕಾದ ದಾಖಲೆಗಳು ಯಾವುದು?
ಬಾಡಿಗೆ ಭೋಗ್ಯದಾರರು ವಿಳಾಸ ಪುರಾವೆಯೊಂದಿಗೆ ನೋಂದಾಯಿಸಿಕೊಳ್ಳಬಹುದು. ಸದರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಆಧಾರ್ ಜೊತೆಗೆ ಬಾಡಿಗೆ ಭೋಗ್ಯದ ಕರಾರು ಪತ್ರವನ್ನು ಸಲ್ಲಿಸುವುದು.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

2 ತಿಂಗಳ ಹಿಂದೆ ಮನೆಯನ್ನು ಬದಲಾಯಿಸಿದ್ದು ಈ ಲಾಭ ಸಿಗುತ್ತದೆಯೇ?
ಹೌದು, ಹೊಸ ಸಂಪರ್ಕಕ್ಕಾಗಿ ನಿಯಮಾವಳಿಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.

ಅಂಗಡಿಯ ಮಾಲೀಕನಾಗಿದ್ದು, ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದೇ?
ಇಲ್ಲ, ಗೃಹಬಳಕೆದಾರರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.

ಎಷ್ಟು ಉಚಿತ ಯೂನಿಟ್ ವಿದ್ಯುತ್‌ಗೆ ಅರ್ಹ?;
2022-23ರ ಸರಾಸರಿ ವಿದ್ಯುತ್ ಬಳಕೆ + ಶೇಕಡ 10% ಹೆಚ್ಚಳದ (ಎರಡು ಸೇರಿಸಿದರೆ ಒಟ್ಟು 200 ಯೂನಿಟ್‌ಗಳಿಗಿಂತ ಒಳಗಿರಬೇಕು) ಸರಾಸರಿ ಬಳಕೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಈ ಯೋಜನೆಯನ್ನು ಪಡೆಯಲು ಖಾತೆ ಸಂಖ್ಯೆಯೊಂದಿಗೆ ಆಧಾರ್‌ನ್ನು ಲಿಂಕ್ ಮಾಡುವುದು ಕಡ್ಡಾಯವೇ?
ಹೌದು, ಗ್ರಾಹಕ ಸಂಖ್ಯೆ/ಖಾತೆ ಸಂಖ್ಯೆಯೊಂದಿಗೆ ಅಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.

ವಿದ್ಯುತ್ ಬಿಲ್ ಬಾಕಿಯನ್ನು ಉಳಿಸಿಕೊಂಡಿದ್ದರೆ, ಈ ಯೋಜನೆಗೆ ಅರ್ಹವೇ?
ಹೌದು, ಆದರೆ ಜೂನ್ 30ರವರೆಗಿನ ವಿದ್ಯುತ್ ಬಾಕಿಯನ್ನು 3 ತಿಂಗಳೊಳಗೆ ಪಾವತಿಸಬೇಕು. ಪಾವತಿಸದಿದ್ದರೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

ವಿದ್ಯುತ್ ಬಿಲ್ ದಿವಂಗತ ತಂದೆಯ ಹೆಸರಿನಲ್ಲಿದೆ? ಇದಕ್ಕಾಗಿ ಹೇಗೆ ಅರ್ಜಿ ಸಲ್ಲಿಸಬಹುದು?
ವಿದ್ಯುತ್ ಸಂಪರ್ಕವನ್ನು ನಿಮ್ಮ ಹೆಸರಿಗೆ ವರ್ಗಾಯಿಸಬೇಕು. ತದ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಹೆಸರಿನ ಬದಲಾವಣೆಯನ್ನು ಎಲ್ಲಾ ಉಪ ವಿಭಾಗಗಳಲ್ಲಿನ ಜನಸ್ನೇಹಿ ವಿದ್ಯುತ್ ಸೇವಾ ಕೌಂಟರ್‌ಗಳಲ್ಲಿ ಮಾಡಲಾಗುತ್ತದೆ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಮಾಸಿಕ ಬಳಕೆಯು 200 ಯೂನಿಟ್‌ಗಳಿಗಿಂತ ಹೆಚ್ಚಿದ್ದರೆ, ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕೇ?
ಹೌದು. ಆ ನಿರ್ದಿಷ್ಟ ತಿಂಗಳಿಗೆ ಮಾತ್ರ ನೀವು ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ವಿದ್ಯುತ್ ಬಳಕೆಯು ಉಚಿತ ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ ಬಿಲ್ ಮೊತ್ತ ಏನಾಗುತ್ತದೆ?
ವಿದ್ಯುತ್ ಬಳಕೆಯು ಅರ್ಹ ಯೂನಿಟ್ ಗಳಿಗಿಂತ ಕಡಿಮೆಯಿದ್ದರೆ ನೀವು ಶೂನ್ಯ ಬಿಲ್‌ನ್ನು ಪಡೆಯುತ್ತೀರಿ.

ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಕಳೆದ 12 ತಿಂಗಳ ಸರಾಸರಿ ವಿದ್ಯುತ್ ಬಳಕೆಯನ್ನು ತೆಗೆದುಕೊಂಡು ಅದರ ಮೇಲೆ ಶೇ.10ರಷ್ಟು ಉಚಿತ ಇರುವಂತೆ ವಿದ್ಯುತ್ ಅನ್ನು ನೀಡುವುದಾಗಿ ಘೋಷಿಸಲಾಗಿದೆ. ಹಾಗಾದರೆ 12 ತಿಂಗಳು ಬಳಸಿದ ವಿದ್ಯುತ್ ತಿಳಿಯುವುದು ಹೇಗೆ ಅನ್ನೋದು ನೋಡಣ.

https://hescom.karnataka.gov.in/ ವೆಬ್ ಸೈಟ್ ಗೆ ಹೋಗಿ

ಮುಖಪುಟದಲ್ಲಿರುವ ಆನೈನ್ ಸೇವೆಗಳು ಕೆಳಗಡೆ ಆನ್ ವಿದ್ಯುತ್ ಬಿಲ್ ಪಾವತಿ ಮೇಲೆ ಕ್ಲಿಕ್ ಮಾಡಿ

ನಂತರ ಪಟ್ಟಣದ ಗ್ರಾಹಕರಾಗಿದ್ದರೆ ಆನೈನ್ ವಿದ್ಯುತ್ ಬಿಲ್ ಪಾವತಿಗಾಗಿ ಇಲ್ಲಿ ಕ್ಲಿಕ್ ಮಾಡಿ (rapdrp ಪಟ್ಟಣಗಳು) select ಮಾಡಿ ಗ್ರಾಮಾಂತರ ಗ್ರಾಹಕರಾಗಿದ್ದರೆ ಓoಟಿ non rapdrp ಪಟ್ಟಣಗಳು ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ನಂತರ ಮೊದಲ ಬಾರಿ register ಮಾಡುತ್ತಿದ್ದರೆ, click here to register ಮೇಲೆ ಕ್ಲಿಕ್ ಮಾಡಿ, ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಕಿ ನಂತರ use e-mail address as user id ಮೇಲೆ ಕ್ಲಿಕ್ ಮಾಡಿ, ನಿಮಗೆ ಬೇಕಾದ password create ಮಾಡಿ, confirm password ಹಾಕಿ

ನಂತರ ನಿಮ್ಮ ಪಿನ್ ಕೋಡ್,ಜನ್ಮ ದಿನಾಂಕ, security question select ಮಾಡಿ ಉತ್ತರವನ್ನು ಹಾಕಿ

ನಂತರ “i have read and agree to the terms and conditions” select ಮಾಡಿ, register ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ “you have successfully registered ಎಂಬ ಸಂದೇಶ ಕಾಣಿಸುತ್ತದೆ

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ನಂತರ ನಿಮ್ಮ ಇ-ಮೇಲ್ ಐಡಿ ಹಾಗೂ create ಮಾಡಿದ password ಹಾಕಿ login ಮಾಡಿ
ನಂತರ my account ಕೆಳಗಡೆ consumption calculator ಮೇಲೆ ಕ್ಲಿಕ್ ಮಾಡಿ, from july_2022 ಯಿಂದ june-2023 ರವರೆಗೆ select ಮಾಡಿ, calculator usage ಮೇಲೆ ಕ್ಲಿಕ್ ಮಾಡಿ

ನಂತರ print view data ಮೇಲೆ ಕ್ಲಿಕ್ ಮಾಡಿದರೆ ನೀವು ಇಲ್ಲಿಯವರೆಗೂ ಬಳಸಿದ ವಿದ್ಯುತ್ ಹಾಗೂ ಕಟ್ಟಿದ ವಿದ್ಯುತ್ ಬಿಲ್ ನ ಮಾಹಿತಿ ದೊರೆಯಲಿದೆ.

ಇದನ್ನೂ ಓದಿ; ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

ವಿದ್ಯುತ್ ಸರಾಸರಿ ಲೆಕ್ಕ ಹೇಗೆ?
ಉದಾಹರಣೆಗೆ ಕಳೆದ 1 ವರ್ಷದಲ್ಲಿ ಪ್ರತಿ ತಿಂಗಳು ನೀವು 60+70+60+65+55+75+50+55+80+60+55+60 ಹೀಗೆ ಯೂನಿಟ್ ವಿದ್ಯುತ್ ಬಳಸಿರುತ್ತೀರಿ ಎಂದುಕೊಳ್ಳಿ. ಅಂದರೆ ಒಟ್ಟು 745 ಯೂನಿಟ್ ವಿದ್ಯುತ್ ಅನ್ನು ನೀವು ಒಂದು ವರ್ಷದಲ್ಲಿ ಬಳಸಿರುತ್ತೀರಿ. ಇದರ ಸರಾಸರಿ 62.08 ಯೂನಿಟ್ ವಿದ್ಯುತ್ ಆಗುತ್ತದೆ. ಅದರ ಮೇಲೆ ಶೇ. 10ರಷ್ಟು (6.2ಯುನಿಟ್) ಉಚಿತ ಎಂದರೆ ಒಟ್ಟು ಗರಿಷ್ಠ 62.08+6.2=68.28 ಯೂನಿಟ್‌ವರೆಗೂ ಉಚಿತ ವಿದ್ಯುತ್ ಅನ್ನು ಸರ್ಕಾರ ನಿಮ್ಮ ಮನೆಗೆ ನೀಡುತ್ತದೆ.

Most Popular

Recent Comments