ಅಂಕೋಲ(ಉತ್ತರ ಕನ್ನಡ ಜಿಲ್ಲೆ): ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರು ಮೃತಪಟ್ಟಿದ್ದಾರೆ ಹಾಗೂ ಅವರ ಜೊತೆಯಿದ್ದ ಇತರ ಮೂವರು ವ್ಯಕ್ತಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.
ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬoಧಿಸಿದoತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆಯನ್ನು ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತವು ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್‌ರವರು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.