VA List: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಪಟ್ಟಿ ಪ್ರಕಟ

(VA List:) ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಆಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವ ಅಭ್ಯರ್ಥಿಗಳು ಈಗ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


30 ಜಿಲ್ಲೆಗಳು ಸಹ ತಮ್ಮ ತಮ್ಮ ಜಿಲ್ಲಾ ಅಧಿಕೃತ ವೆಬ್‌ ಸೈಟ್‌ ಗಳಲ್ಲಿ, ತಮ್ಮ ಜಿಲ್ಲೆಯಲ್ಲಿ ಭರ್ತಿ ಮಾಡಲಿರುವ ಹುದ್ದೆಗಳಿಗೆ ಅನುಗುಣವಾಗಿ 1:3 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿವೆ. ನಿಮ್ಮ ಜಿಲ್ಲೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಹತಾ ಪಟ್ಟಿ ಚೆಕ್‌ ಮಾಡಿಕೊಳ್ಳಬಹುದಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಮೂಲ ದಾಖಲೆಗಳ ಪರಿಶೀಲನೆಗೆ ಹಾಜರು ಪಡಿಸಬೇಕಾದ ಡಾಕ್ಯುಮೆಂಟ್‌ ಗಳು:
* ವಯೋಮಿತಿ ಅರ್ಹತೆ ಪ್ರಮಾಣ ಪತ್ರ – ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಜನ್ಮ ದಿನಾಂಕ ಪ್ರಮಾಣಪತ್ರ
* ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ
* ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
* ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
* ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
* ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರಗಳು
* ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ
* ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ
* ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ
* ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ
* 2 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ


ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ


ವಿಎಒ 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸುವ ದಿನಾಂಕಗಳು ಯಾವುವು?
02-01-2025 ರಿಂದ 10-01-2025 ರವರೆಗೆ.

* ತಾತ್ಕಾಲಿಕ 1:1 ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು 15-01-2025 ರಂದು ಬಿಡುಗಡೆ ಮಾಡಲಾಗುತ್ತದೆ.
* 27-01-2025 ರಂದು ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

VA List: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಪಟ್ಟಿ ಪ್ರಕಟ
VA List: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಪಟ್ಟಿ ಪ್ರಕಟ

ಇತ್ತೀಚಿನ ಜನಪ್ರಿಯ ಸುದ್ದಿಗಳು