VEHICLE: ವಾಹನ ಸವಾರರಿಗೆ ಹೊರಬಿತ್ತು ಮತ್ತೊಂದು ಸುದ್ದಿ

(VEHICLE) ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 17 ರ ವರೆಗೆ ಇದ್ದ ಡೆಡ್ ಲೈನ್ ಅನ್ನು 2024 ರ ಮೇ 31 ರವರೆಗೆ ವಿಸ್ತರಿಸಿ ಅವಕಾಶ ನೀಡಿದೆ. ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು HSRP ಅಳವಡಿಕೆ ಮಾಡಿದ್ದಾರೆ. ಹೀಗಾಗಿ ಈ ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್ ಲೈನ್ ವಿಸ್ತರಿಸಿ ಅವಕಾಶ ನೀಡಿದೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್


ಈ HSRP ಅನ್ನು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್ ಗಳಲ್ಲಿ ನಂಬರ್ ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್ ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ.

ದಂಡ ಪ್ರಯೋಗ?:
ರಾಜ್ಯ ಸಾರಿಗೆ ಇಲಾಖೆ ಮೇ 31 ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಅದಾದ ನಂತರ ಅಂದರೆ, ಜೂ.1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. HSRP ಇಲ್ಲದ ವಾಹನಗಳಿಗೆ ನಿಯಮದಂತೆ 500 ರಿಂದ 1000 ಸಾವಿರ ರೂ. ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


HSRP ನಂಬರ್ ಪ್ಲೇಟ್ ನ ಪ್ರಯೋಜನವೇನು?;
* HSRP ನಂಬರ್ ಪ್ಲೇಟ್ ನಲ್ಲಿ ನಿಮ್ಮ ವಾಹನದ ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಇರುತ್ತವೆ.
* ಈ ಮಾಹಿತಿಗಳು ಕೇಂದ್ರೀಯ ಡೆಟಾಬೇಸ್ ನಲ್ಲಿ ಸಂಗ್ರಹ ಆಗಿರುತ್ತದೆ.
* ಒಂದೊಮ್ಮೆ ನಿಮ್ಮ ವಾಹನ ಕಳವಾದರೆ ಈ ಮಾಹಿತಿಯನ್ನ ಬಳಸಿಕೊಂಡು ಪತ್ತೆಹಚ್ಚಲು ಸಹಕಾರಿಯಾಗಿದೆ.
* ನಿಮ್ಮ ವಾಹನಕ್ಕೆ ಹಾಕಿರುವ ನಂಬರ್ ಪ್ಲೇಟ್ ಅನ್ನು ಅನಧಿಕೃತವಾಗಿ ಬದಲಾವಣೆ ಮಾಡಲು ಅಸಾಧ್ಯ.
* ಕಳ್ಳರು ಈ ನಂಬರ್ ಪ್ಲೇಟ್ ಅನ್ನು ತೆಗೆಯಲು ಸಾಧ್ಯವಿಲ್ಲ. ಪ್ಲೇಟ್ ನಲ್ಲಿ ಇರುವ ಮಾಹಿತಿಯನ್ನ ತಿದ್ದಲು ಕೂಡಾ ಸಾಧ್ಯವಿಲ್ಲ.
* ವಾಹನವನ್ನ ಕಳ್ಳತನ ಮಾಡಿ ನಂಬರ್ ಪ್ಲೇಟ್ ತೆಗೆದು ಭಯೋತ್ಪಾದನೆ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳುವುದನ್ನು HSRP ಮೂಲಕ ತಡೆಗಟ್ಟಬಹುದು.


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!;  ಸರ್ಕಾರದ ಈ ಹೊಸ ರೂಲ್ಸ್ ನಿಂದ ಗ್ರಾಹಕರಿಗೆ ಬಿಗ್ ರಿಲೀಫ್; ಚಿನ್ನದ ಮೇಲಿನ ಸಾಲ ಮಾಡಿದ್ರೆ ಮಿಸ್ ಮಾಡ್ದೆ ಓದಿ


ಯಾವ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ:
ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲಾ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಹಾಗಾದರೆ ಈ HSRP ನಂಬರ್ ಪ್ಲೇಟ್ ಅವಳಡಿಕೆ ಹೇಗೆ:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.


ಇದನ್ನೂ ಓದಿ: ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


VEHICLE: ವಾಹನ ಸವಾರರಿಗೆ ಹೊರಬಿತ್ತು ಮತ್ತೊಂದು ಸುದ್ದಿ
VEHICLE: ವಾಹನ ಸವಾರರಿಗೆ ಹೊರಬಿತ್ತು ಮತ್ತೊಂದು ಸುದ್ದಿ