ದಿನಾಂಕ 18 ಏಪ್ರಿಲ್ 2023ರಂದು ಕೊಡಗಿನ ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಕುರಿತು ಗಂಭೀರ ಆರೋಪ ಕೇಳಿಬಂದಿದ್ದು ಈ ಘಟನೆ ಸಂಬಂಧ ಚುನಾವಣೆ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ; ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು
ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ
ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಸಾವಿರಾರು ಸಂಖ್ಯೆ ಜನರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ರ್ಯಾಲಿ ನಡೆಸಿದ್ದರು.
ಈ ಸಂದರ್ಭದಲ್ಲಿ ನೂರಾರು ಮಕ್ಕಳು ಕಾಂಗ್ರೆಸ್ ಶಾಲು, ಟೋಪಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರಿನ ಕೈ ಟಿಕೆಟ್ ಕೊನೆಗೂ ಫೈನಲ್
- ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್; ಲಕ್ಷಾಂತರ. ಹಣ ವಶ, ನಾಲ್ವರ ಬಂಧನ
- `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟಿತ ಹೋರಾಟಕ್ಕೆ ಬೆಲೆ ಇದೆ’
ಚುನಾವಣಾ ಆಯೋಗ ಈಗಾಗಲೇ 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದ್ಧು ಈ ಬೆಳವಣಿಗೆ ಸಂಬಂಧ ಚುನಾವಣೆ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.
ಹಣ ನೀಡಿ ಜನರನ್ನು ಕರೆತಂದರು:
ಇನ್ನು ಹಣ ನೀಡಿ ಮೆರವಣಿಗೆಗೆ ಜನರನ್ನು ಕರೆದುಕೊಂಡು ಬಂದಿರುವುದು ಹಾಗೂ ಹೊರ ಊರುಗಳಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಸಾಕಷ್ಟು ವೈರಲ್ ಆಗಿದೆ.
ಚಿಕ್ಕಮಗಳೂರು; ಟವರ್ ಮೇಲೇರಿದ ಬಿಜೆಪಿ ಕಾರ್ಯಕರ್ತ; ವಿಡಿಯೋ ಮಾಡಿ ಹೇಳಿದ್ದೇನು ಗೊತ್ತಾ?
ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಇದರ ಮಧ್ಯೆ ಬಿಜೆಪಿ ಕಾರ್ಯಕರ್ತನೊಬ್ಬ ಬಿಎಸ್‌ಎನ್‌ಎಲ್ ಟವರ್ ಮೇಲೇರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು
ರಂಗಪ್ಪ ಬೋವಿ ಎನ್ನುವಾತ ಟವರ್ ಮೇಲೆರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಟವರ್ ಮೇಲೆ ಕುಳಿತು ವಿಡಿಯೋ ಮಾಡಿರುವ ರಂಗಪ್ಪ ಬೋವಿ, ರಾಜಕೀಯದಿಂದ ನೊಂದು, ಗ್ರಾಮಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ.
ಕಳೆದ 15 ವರ್ಷದಿಂದ ಸಕ್ರಿಯ ಬಿಜೆಪಿ ಕಾರ್ಯಕರ್ತನಾಗಿರುವ ರಂಗಪ್ಪ ಬೋವಿಗೆ ಗ್ರಾಮಸ್ಥರು ಕಿರುಕುಳ ನೀಡುತ್ತಿದ್ದಾರಂತೆ. ಅಲ್ಲದೇ ರಾಜಕೀಯದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಪೊಲೀಸರು ದೌಡಾಯಿಸಿದ್ದು, ಕೆಳಗಿಳಿಯುವಂತೆ ಬೇಡಿಕೊಂಡಿದ್ದಾರೆ. ಆದರೆ, ರಂಗಪ್ಪ ಕೆಳಗೆ ಇಳಿಯಲಿಲ್ಲ ಇದರಿಂದ ಪೊಲೀಸರು, ಗ್ರಾಮಸ್ಥರ ಸುಸ್ತಾಗಿ ಹೋಗಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರಿನ ಕೈ ಟಿಕೆಟ್ ಕೊನೆಗೂ ಫೈನಲ್