Sunday, June 4, 2023
Homeಇತರೆವಿರಾಟ್ ಕೊಹ್ಲಿಯ 10 ತಿಂಗಳ ಮಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ ನೀಚರು.

ವಿರಾಟ್ ಕೊಹ್ಲಿಯ 10 ತಿಂಗಳ ಮಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ ನೀಚರು.

ಐಸಿಸಿ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದ ಕಾರಣಕ್ಕೆ ವಿಕೃತರು ಸೋಷಿಯಲ್ ಮೀಡಿಯಾ ಮೂಲಕ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ.

ಅಕ್ಟೋಬರ್ 24 ರಂದು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಭಾರತ 10 ವಿಕೆಟ್​ಗಳ ಅಂತರದಿಂದ ಸೋಲನ್ನು ಅನುಭವಿಸಿತ್ತು. ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿಯನ್ನು ನಡೆಸಿದ್ದರು. ಇದರ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ, ಶಮಿ ಪರವಾಗಿ ನಿಂತಿದ್ದರು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ ಕೊಹ್ಲಿ, ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣವನ್ನು ನಡೆಸುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು.

ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದವೇ ತಿರುಗಿದ್ದಾರೆ. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೊಹ್ಲಿಯ 10 ತಿಂಗಳ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್​ಗಳು ಈಗ ವೈರಲ್ ಆಗುತ್ತಿದ್ದು, ಪಾಕ್​ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಕಿಡಿಗೇಡಿಗಳ ಇಂತಹ ನೀಚ ನಡೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಹಾಲಿ ನಾಯಕ ವಿರಾಟ್ ಕೊಹ್ಲಿ ಮಗುವಿಗೆ ಎದುರಾದಂತೆ, ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಪುತ್ರಿ ಜೀವಾ ಕೂಡ ಕಳೆದ ವರ್ಷ ಅತ್ಯಾಚಾರದ ಬೆದರಿಕೆಯನ್ನು ಎದುರಿಸಿದ್ದಾರೆ. 2020ರ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೀರಸ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಇದರ ಬೆನ್ನಲ್ಲೇ 5 ವರ್ಷದ ಧೋನಿ ಪುತ್ರಿ ಜೀವಾಳನ್ನು ರೇಪ್ ಮಾಡುವುದಾಗಿ ಬೆದರಿಕೆಯನ್ನು ಹಾಕಲಾಗಿತ್ತು. ಗುಜರಾತಿನ ಕಛ್ ಜಿಲ್ಲೆಯ ನಮ್ಮ ಕಪಾಯದ ನಿವಾಸಿಯೊಬ್ಬ ಧೋನಿ ಪತ್ನಿ ಸಾಕ್ಷಿ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಝಿವಾಗೆ ಬೆದಿರಿಕೆ ಹಾಕಿರುವುದು ಪತ್ತೆಯಾಗಿತ್ತು.

Most Popular

Recent Comments