wcd 25: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್‌

(wcd 25: ) ಬೆಂಗಳೂರು ಸುತ್ತಲಿನ ಕೆಲವು ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್‌ ಅಪ್ಡೇಟ್


ನೇಮಕಾತಿ ಪ್ರಾಧಿಕಾರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಹುದ್ದೆಗಳ ಸಂಖ್ಯೆ:
222

ವೇತನ:
10,000-15,000


ಇದನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!


ಎಲ್ಲೆಲ್ಲಿ ಎಷ್ಟು ಹುದ್ದೆಗಳು ಖಾಲಿ:
* ದೇವನಹಳ್ಳಿ: ಅಂಗನವಾಡಿ ಕಾರ್ಯಕರ್ತೆ- 7, ಅಂಗನವಾಡಿ ಸಹಾಯಕಿ-33.
* ದೊಡ್ಡಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆ-10, ಅಂಗನವಾಡಿ ಸಹಾಯಕಿ- 47
* ಹೊಸಕೋಟೆ: ಅಂಗನವಾಡಿ ಕಾರ್ಯಕರ್ತೆ-10, ಅಂಗನವಾಡಿ ಸಹಾಯಕಿ- 52.
* ನೆಲಮಂಗಲ: ಅಂಗನವಾಡಿ ಕಾರ್ಯಕರ್ತೆ-11, ಅಂಗನವಾಡಿ ಸಹಾಯಕಿ- 52

ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಉತ್ತೀರ್ಣ.
* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಉತ್ತೀರ್ಣ.

ವಯೋಮಿತಿ:
ಕನಿಷ್ಠ 19 ವರ್ಷ ಆಗಿರಬೇಕು. 35 ವರ್ಷ ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.


ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://karnemakaone.kar.nic.in/abcd/ApplicationForm_JA_org.aspx ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಯಾವುದು?:
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ವಾಸಸ್ಥಳ ದೃಢೀಕರಣ ಪತ್ರ.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ಇತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
25-03-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:(wcd 25: ) 
30-04-2025

wcd 25: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್‌
wcd 25: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್‌