Wcd Chikkamagaluru: ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

(Wcd Chikkamagaluru) ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ರವರೆಗೆ ಈ ಹಿಂದೆ ಅವಕಾಶ ನೀಡಿತ್ತು.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಇದೀಗ ಸದರಿ ಹುದ್ದೆಗಳಿಗೆ ನಾಲ್ಕು ಹಂತದ ಪೂರ್ಣ ಅರ್ಜಿ ಸಲ್ಲಿಸಿಲ್ಲವೋ, ಅಂತಹ ಅಭ್ಯರ್ಥಿಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಡಿಸೆಂಬರ್ 26 ರಿಂದ 2025 ರ ಜನವರಿ 5 ರವರೆಗೆ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ.

ಹುದ್ದೆಯ ವಿವರ:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿ


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


ಹುದ್ದೆಯ ಸಂಖ್ಯೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 50
* ಅಂಗನವಾಡಿ ಸಹಾಯಕಿ ಹುದ್ದೆ ಸಂಖ್ಯೆ: 217

ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ: 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ತೇರ್ಗಡೆ
* ಅಂಗನವಾಡಿ ಸಹಾಯಕಿ ಹುದ್ದೆಗೆ: 10ನೇ ತರಗತಿ ತೇರ್ಗಡೆ.


ಇದನ್ನೂ ಓದಿ: ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್


ವಯೋಮಿತಿ:
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು.
* ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು * ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?;
karnemakaone.kar.nic.in/abcd/ApplicationForm_JA_org.aspx ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಬೇಕಾದ ಅಗತ್ಯ ದಾಖಲೆಗಳು ಯಾವುದು?;
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ವಾಸಸ್ಥಳ ದೃಢೀಕರಣ ಪತ್ರ.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
26-12-2024


ಇದನ್ನೂ ಓದಿ; ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-01-2025

Wcd Chikkamagaluru: ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ
Wcd Chikkamagaluru: ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು