WCD DG: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್
(WCD DG:) ದಾವಣಗೆರೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಣ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ
ನೇಮಕಾತಿ ಪ್ರಾಧಿಕಾರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉದ್ಯೋಗ ಜಿಲ್ಲೆ:
ದಾವಣಗೆರೆ
ಹುದ್ದೆ ಹೆಸರು:
* ಅಂಗನವಾಡಿ ಕಾರ್ಯಕರ್ತೆ
* ಅಂಗನವಾಡಿ ಸಹಾಯಕಿಯರು
ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ: 30
ಅಂಗನವಾಡಿ ಸಹಾಯಕಿಯರ ಹುದ್ದೆ ಸಂಖ್ಯೆ: 213
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ದಾವಣಗೆರೆ ಜಿಲ್ಲೆಯ ಯಾವ್ಯಾವ ತಾಲುಕಿನಲ್ಲಿ ಎಷ್ಟು ಹುದ್ದೆಗಳಿವೆ ಎಂಬುದರ ಡಿಟೈಲ್ಸ್ ಇಲ್ಲಿದೆ ನೋಡಿ.
ದಾವಣಗೆರೆ : ಕಾರ್ಯಕರ್ತೆ- 5 , ಸಹಾಯಕಿ- 98
ಹರಿಹರ : ಕಾರ್ಯಕರ್ತೆ- 5 , ಸಹಾಯಕಿ- 44
ಹೊನ್ನಾಳಿ: ಕಾರ್ಯಕರ್ತೆ- 5 , ಸಹಾಯಕಿ- 34
ಜಗಲೂರು: ಕಾರ್ಯಕರ್ತೆ- 15 , ಸಹಾಯಕಿ- 37
ವಿದ್ಯಾರ್ಹತೆ:
ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್.
ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್.
ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 19 ವರ್ಷ ಆಗಿರಬೇಕು. 35 ವರ್ಷ ವಯಸ್ಸು ದಾಟಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ
* ವೈಯಕ್ತಿಕ ಕೆಲವು ವಿವರಗಳು
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ






