Tuesday, November 28, 2023
Homeಇತರೆರಾಜ್ಯದಾದ್ಯಂತ ಮೂರು ದಿನಗಳ ಕಾಲ ಅಧಿಕ ಮಳೆ ಸಂಭವ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ,

ರಾಜ್ಯದಾದ್ಯಂತ ಮೂರು ದಿನಗಳ ಕಾಲ ಅಧಿಕ ಮಳೆ ಸಂಭವ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ,

ಬೆಂಗಳೂರು: ರಾಜ್ಯದಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವುದರಿಂದ ಅಂತಹ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯನ್ನು ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿoದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಅಧಿಕವಾಗಿ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದೆ ಆದ್ದರಿಂದ ಆರೆಂಜ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸೆ.9ರ ವರೆಗೆ ಮಳೆ ಹೆಚ್ಚಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯವರು ಮಾಹಿತಿಯನ್ನು ನೀಡಿದ್ದಾರೆ.

ಹಾಗೂ ಉತ್ತರ ಒಳನಾಡಿನಲ್ಲಿರುವಂತಹ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Most Popular

Recent Comments