ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಶೇ. 40. 73 ರಷ್ಟು ಮತದಾನ ಆಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಪಶ್ಚಿಮ ಬಂಗಾಳದ 30 ಸ್ಥಾನಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ 23 ಮಹಿಳೆಯರು ಸೇರಿದಂತೆ 191 ಅಭ್ಯರ್ಥಿಗಳ ಅದೃಷ್ಟ ಇಂದು ನಿರ್ಧಾರವಾಗಲಿದೆ.
ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸಹೋದರನ ಕಾರಿಗೆ ದುಷ್ಕರ್ಮಿಗಳು ಸಾಬಾಜ್ ಪುತ್ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಅಲ್ಲದೇ, ಆತನ ಕಾರು ಚಾಲಕನ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಟಿಎಂಸಿ ಬ್ಲಾಕ್ ಅಧ್ಯಕ್ಷ ರಾಮ್ ಗೋವಿಂದ್ ದಾಸ್ ಪ್ರಚೋದನೆಯಿಂದ ಹಲ್ಲೆ ದಾಳಿ ನಡೆದಿದೆ ಎಂದು ಸುವೇಂದು ಮತ್ತು ಆತನ ಸಹೋದರ ದಿಬಿಯಾಂದು ಅಧಿಕಾರಿ ಆರೋಪಿಸಿದ್ದಾರೆ. ಘಟನೆಯಲ್ಲಿ ಸೋಮೆಂದುಗೆ ಯಾವುದೇ ರೀತಿಯ ಹಲ್ಲೆಯಾಗಿಲ್ಲ.
ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ ಎಂದು ದಿಬಿಯಾಂದು ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.