WhatsApp: 2 ಬಿಲಿಯನ್ ಜಾಗತಿಕ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ದಿನಕ್ಕೊಂದು ನೂತನ ಫೀಚರ್ ಗಳನ್ನು ಘೋಷಿಸುತ್ತಿದೆ. ನೂತನ ಅಪ್ಡೇಟ್ ಗಳನ್ನು ನೀಡಿ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿರುವ ವಾಟ್ಸ್ಆ್ಯಪ್ ಇದೀಗ ಬೆರಗುಗೊಳಿಸುವ ಅಪ್ಡೇಟ್ ನೀಡಲು ಮುಂದಾಗಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
ಹೌದು, ವಾಟ್ಸ್ಆ್ಯಪ್ ನಲ್ಲಿ ಪ್ರಸ್ತುತ ಬಳಕೆದಾರರು ತಮ್ಮ ಸ್ಟೇಟಸ್ ಅನ್ನು 24 ಗಂಟೆಗಳವರೆಗೆ ಇರುವ ರೀತಿಯಲ್ಲಿ ಪೋಸ್ಟ್ ಮಾಡಬಹುದು. ಆದರೆ ಇತ್ತೀಚಿನ ವರದಿಯ ಪ್ರಕಾರ ಈ 24 ಗಂಟೆಗಳ ಅವಧಿಯನ್ನು ವಾಟ್ಸ್ ಆಯಪ್ ವಿಸ್ತರಿಸಲಿದೆಯಂತೆ. ವಾಟ್ಸ್ಆ್ಯಪ್ ಅಪ್ ಡೇಟ್‌ಗಳ ಬಗ್ಗೆ ಸದಾ ಮಾಹಿತಿಯನ್ನು ತಿಳಿಸುವ WABetaInfo ನ ವರದಿಯ ಪ್ರಕಾರ, ಕಂಪನಿಯು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎರಡು ವಾರಗಳವರೆಗೆ ಲೈವ್ ಆಗಿ ಇರಿಸಲು ಅನುಮತಿಸುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಬಳಕೆದಾರರು ತಮ್ಮ ಸ್ಟೇಟಸ್ ಗೋಚರಿಸುವ ಅವಧಿಯನ್ನು ನಿಗದಿ ಪಡಿಸುವ ಆಯ್ಕೆಯನ್ನು ಸಹ ಹೊಂದಿರುತ್ತಾರೆ ಎನ್ನಲಾಗಿದೆ.

ಮುಂಬರುವ ಅಪ್ ಡೇಟ್‌ನಲ್ಲಿ, ವಾಟ್ಸ್ಆ್ಯಪ್ (WhatsApp:) ಬಳಕೆದಾರರಿಗೆ ಸ್ಟೇಟಸ್ ವಿಭಾಗದಲ್ಲಿ ನಾಲ್ಕು ಅವಧಿಯ ಆಯ್ಕೆಗಳನ್ನು ಒದಗಿಸುವ ನಿರೀಕ್ಷೆಯಿದೆ: 24 ಗಂಟೆಗಳು, 3 ದಿನಗಳು, 1 ವಾರ ಮತ್ತು 2 ವಾರಗಳು. ಇದು ಬಳಕೆದಾರರು ತಮ್ಮ ಸ್ಟೇಟಸ್ ಅನ್ನು ಎಷ್ಟು ಸಮಯದವರೆಗೆ ವೀಕ್ಷಿಸಲು ಲಭ್ಯವಾಗಬೇಕೆಂದು ಬಯಸುತ್ತಾರೆ ಎಂಬುದರ ಕುರಿತು ಆಗಿದೆ.
ಇದನ್ನೂ ಓದಿ; ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
ವಾಟ್ಸ್ಆ್ಯಪ್ ನಲ್ಲಿ ಫಿಲ್ಟರ್ ಆಯ್ಕೆ:
ಸದ್ಯದಲ್ಲೇ ವಾಟ್ಸ್ಆ್ಯಪ್ ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್ ನಲ್ಲಿ ಮಹತ್ವದ ಬದಲಾವಣೆ ತರಲಿದೆ. ವಾಟ್ಸ್ಆ್ಯಪ್ ಬೀಟಾ 2.23.14.17 ಅಪ್ಡೇಟ್ ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಫಿಲ್ಟರ್ ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್ ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್ಆ್ಯಪ್ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- psi ನೇಮಕಾತಿ ಹಗರಣ; ಅಮೃತ್ ಪೌಲ್‌ಗೆ ಹೈಕೋರ್ಟ್ ನಿಂದ ಜಾಮೀನು
- ಗೂಗಲ್‌ಗೆ 25ರ ಸಂಭ್ರಮ; ಡೂಡಲ್ ಮೂಲಕ ಜನ್ಮದಿನ ಆಚರಿಸಿಕೊಂಡ ಸರ್ಚ್ ಎಂಜಿನ್
- ಈ ನಾಯಕರುಗಳಿಗೆ ಶೃಂಗೇರಿ ಶ್ರೀಗಳು ಆಶೀರ್ವಾದ ನೀಡಲು ನಿರಾಕರಿಸಿದರೆ?; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ನ ಸತ್ಯಾಸತ್ಯತೆ ಏನು?
- ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
- ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply