ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದು ಮನೆಗೆ ನುಗ್ಗಿ ಮನೆಯ ಪೋರ್ಟಿಕೋ, ಕಿಟಕಿ, ಟಿ.ವಿ. ಪುಡಿಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿ ಕ್ಯಾಮನಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ 11 ಸಮಯದಲ್ಲಿ ನಡೆದಿದೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು
ಕ್ಯಾಮನಹಳ್ಳಿ ಗ್ರಾಮದ ಕೃಷಿ ಶಂಕ್ರಪ್ಪ ಎನ್ನುವವರ ಮನೆ ಸಮೀಪದ ಗೇಟ್ ಮುರಿದು ಒಳನುಗ್ಗಿರುವ ಕಾಡಾನೆ ಮನೆ ಮುಂದಿನ ಪೋರ್ಟಿಕೋವನ್ನು ಜಖಂಗೊಳಿಸಿದೆ. ನಂತರ ಮನೆಯ ಮುಂಭಾಗದ ದೊಡ್ಡ ಗಾತ್ರದ ಕಿಟಕಿಯನ್ನು ನೂಕಿ ಪುಡಿಮಾಡಿದೆ. ಮತ್ತೊಂದು ಕಿಟಕಿಯ ಗಾಜು ಪುಡಿಮಾಡಿದ ಪರಿಣಾಮ ಮನೆಯೊಳಗಿದ್ದ ಟಿ.ವಿ. ಮತ್ತು ಟಿ.ವಿ. ಸ್ಟ್ಯಾಂಡ್ ಪುಡಿಯಾಗಿವೆ. ಮನೆ ಬಹುತೇಕ ಜಖಂಗೊಂಡಿದ್ದು, ಮನೆಯ ಮಾಲೀಕರಿಗೆ ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಮನೆಯ ಟೆರೆಸ್ ಮೇಲೆ ಭತ್ತವನ್ನು ಮೂಟೆಯಲ್ಲಿ ಕಟ್ಟಿಟ್ಟಿದ್ದು, ಆನೆ ಆ ಭತ್ತವನ್ನು ತಿನ್ನಲು ಪ್ರಯತ್ನಿಸಿದೆ. ಮನೆಯಲ್ಲಿ ಮಲಗಿದ್ದವರು ಶಬ್ದವನ್ನು ಕೇಳಿ ಗಾಬರಿಯಿಂದ ಎದ್ದು ನೋಡಿದಾಗ ಆನೆ ಮನೆಯ ಮುಂಭಾಗದಲ್ಲಿ ನಿಂತು ಮನೆಯನ್ನು ಜಖಂಗೊಳಿಸುತ್ತಿತ್ತು. ಮನೆಯವರು ಕೂಗಿಕೊಂಡಾಗ ಕಾಡಾನೆ ಸ್ಥಳದಿಂದ ಕಾಲ್ಕಿತ್ತಿದೆ ಎಂದು ತಿಳಿದುಬಂದಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದ್ರು ಡ್ರಾಮ ಮಾಡಿ ಈಶ್ವರಪ್ಪ ಬಳಿ ಹಣ ಪೀಕಿದ
- ಯುವತಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಸಿಟಿ ಬಸ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ
ಈ ಘಟನೆಯಿಂದ ಸುತ್ತಲ ಗ್ರಾಮಸ್ಥರು ಆತಂಕಗೊಂಡಿದ್ದು, ಇಷ್ಟು ದಿವಸ ತೋಟಗದ್ದೆಗಳಿಗೆ ದಾಳಿ ಮಾಡಿ ಬೆಳೆಗಳನ್ನು ನಾಶಮಾಡುತ್ತಿದ್ದ ಕಾಡಾನೆಗಳು ಈಗ ಮನೆಯನ್ನೇ ಕೆಡವಲು ಪ್ರಯತ್ನಿಸಿರುವುದು ಜನರನ್ನು ಭಯಭೀತರನ್ನಾಗಿಸಿದೆ.
ಇದನ್ನೂ ಓದಿ; ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು
ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’
ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.
ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.
ಇದನ್ನೂ ಓದಿ; ನಿಮ್ಮ ಜಿಲ್ಲೆಯಿಂದ ಯಾರೆಲ್ಲ ಸಚಿವ ಸಂಪುಟಕ್ಕೆ ಸಂಭಾವ್ಯರು? ಇಲ್ಲಿದೆ ಮಾಹಿತಿ
ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.
ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.
ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20 ಲಕ್ಷ ರೂ.ಗಳ ಬೇಡಿಕೆ
ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.