ಸೈಟ್ ವಿಚಾರಕ್ಕೆ ಗಲಾಟೆ: ಮಹಿಳೆಗೆ ಚಾಕುವಿನಿಂದ ಹಲ್ಲೆ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮಹಿಳೆ ಮೇಲೆ ಹಲ್ಲೆ ನೆಡೆಸಿ ಕೆನ್ನೆ ಸೀಳಿರುವ ಘಟನೆ ಶನಿವಾರ ಸಂಜೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ ಹಲ್ಲೆಗೊಳಾಗದ ಮಹಿಳೆ. ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮಲ್ಲೇಶ್ ಹಾಗೂ ಇತರರು ಹಲ್ಲೆ ಮಾಡಿರುವ ವ್ಯಕ್ತಿ.

ಇದನ್ನೂ ಓದಿ; ಹಿಟ್‌ ಅಂಡ್‌ ರನ್‌; ತಪ್ಪಿದ ಭಾರಿ ಅನಾಹುತ

ಇದನ್ನೂ ಓದಿ; ವಿದ್ಯುತ್‌ ತಂತಿ ತಗುಲಿ ಕಾಡಾನೆ ಸಾವು

ಗೀತಾ ಹಾಗೂ ಆಕೆಯ ಪತಿ ಬೋರೇಗೌಡ ಹಾಗೂ ಮಲ್ಲೇಶ್ ಅವರ ನಡುವೆ ಸೈಟ್ ವಿಚಾರಕ್ಕೆ ಈ ಹಿಂದೆ ಗಲಾಟೆ ನಡೆದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೋರೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದ ತೀರ್ಪು ಬೋರೇಗೌಡನ ಪರವಾಗಿದ್ದು ತಮ್ಮ 56 ಅಡಿ ಅಗಲ, 26 ಅಡಿ ಉದ್ದ ಸೈಟ್ ನಲ್ಲಿ ಮನೆ ನಿರ್ಮಿಸಲು ಶನಿವಾರ ಫೌಂಡೇಷನ್ ಹಾಕುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಮಲ್ಲೇಶ್ ಹಾಗೂ ಆತನ ಸ್ನೇಹಿತರು ನಿನ್ನ ಜಾಗ 21 ಅಡಿ ಅಗಲ 56 ಅಡಿ ಉದ್ದ ಇಲ್ಲೇಕೆ ಪಾಯ ತೆಗೆಯುತ್ತಿದ್ದೀಯ ಎಂದು ಗಲಾಟೆ ತೆಗೆದು ಚಾಕುವಿನಿಂದ ಬೇರೇಗೌಡನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಇದೆ ವೇಳೆ ಅಡ್ದಬಂದ ಆತನ ಮಡದಿ ಗೀತಾ ಮೇಲೆ ಹಲ್ಲೆ ನೆಡೆಸಿ ಚಾಕುವಿನಿಂದ ಕೆನ್ನೆ ಸೀಳಿದ್ದಾನೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಗೀತಾ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ; ಸಂಸತ್ ಭವನದ ಉದ್ಘಾಟನೆಗೆ ಶೃಂಗೇರಿ ಪೀಠದ ಪುರೋಹಿತರು

ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.

ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.