ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತಾಯಿಯೊಬ್ಬರು ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಕಾಣೆಯಾಗಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು
32 ವರ್ಷದ ರಜಿಯಾ ಕೋಂ ಅತಾವುಲ್ಲಾ ಎಂಬುವವರು ತನ್ನ ಮಕ್ಕಳಾದ ಫಾತಿಮಾ ಬಿನ್ ಅತಾವುಲ್ಲಾ(12) ಹಾಗೂ ಮಹಮದ್ ಹಾರೂನ್ ಬಿನ್ ಅತಾವುಲ್ಲಾ(10) ಎಂಬುವವರು 14/05/2023 ರಂದು ಮನೆಯಿಂದ ಹೋದವರು ಈವರೆಗೂ ವಾಪಸ್ಸು ಬಂದಿರುವುದಿಲ್ಲ
ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ಸಾವು, ಮತ್ತೊಬ್ಬ ಗಂಭೀರ
ರಜಿಯಾ ಎಂಬುವವರು ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, 4.8 ಅಡಿ ಎತ್ತರ, ಹಸಿರು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ.
ಮಗಳು ಪಾತಿಮಾ 4.5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಪಿಂಕ್ ಕಲರ್ ಚೂಡಿದಾರ ಧರಿಸಿರುತ್ತಾಳೆ. ಉರ್ದು ಭಾಷೆ ಮಾತನಾಡುತ್ತಾಳೆ.
ಇದನ್ನೂ ಓದಿ; ಮಡಿಕೇರಿಯ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ
ಮಗ ಮಹಮದ್ ಹಾರೂನ್ 4 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಿಳಿ ಶರ್ಟ್ ಮತ್ತು ಚಡ್ಡಿ ಧರಿಸಿರುತ್ತಾನೆ. ಉರ್ದು ಮತ್ತು ಕನ್ನಡ ಭಾಷೆ ಮಾತನಾಡುತ್ತಾನೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಲಾರಿಯ ಹೆಡ್ ಲೈಟ್ ಫೋಕಸ್ ಗೆ ಸ್ಕಿಡ್ ಆದ ಬೈಕ್; ಗಂಭೀರ ಗಾಯ
- ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡ ವೈ ಎಸ್ ವಿ ದತ್ತಾ; ರಾಜಕೀಯದಿಂದಲೂ ನಿವೃತ್ತಿ
- ಹಿಂದಿನ ಶಾಸಕರು ಹಾಗೂ ಅವರ ಬಾವನಿಂದ ಪ್ರಜಾಪ್ರಭುತ್ವದ ಕಗ್ಗೊಲೆ
ಈ ತಾಯಿ ಮಕ್ಕಳ ಸುಳಿವು ದೊರತಲ್ಲಿ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಗೆ ದೂ.ಸಂ: 08182-261418/ 261410 /261422/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’
ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.
ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20 ಲಕ್ಷ ರೂ.ಗಳ ಬೇಡಿಕೆ
ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.