Working Hours: ಸರ್ಕಾರಿ ನೌಕರರಿಗೆ ಕೆಲಸದ ಸಮಯ ಬದಲು
(Working Hours:) ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ
ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ
ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ್ದಾರೆ.






