(Yellow Leaf Disease: ) 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಿಕೆ ಬೆಳೆಗಾರರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ₹10 ಕೋಟಿ ಅನುದಾನವನ್ನು ಸರ್ಕಾರ ನೀಡಲಿದೆ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ
ಅಡಿಕೆ ಬೆಳೆಯಲ್ಲಿ ಕಂಡುಬರುವ ವಿವಿಧ ರೋಗಗಳು ಮತ್ತು ತೆಂಗು ಬೆಳೆಗೆ ತೊಂದರೆ ಉಂಟುಮಾಡುತ್ತಿರುವ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದಕ್ಕೂ ಜೊತೆಗೆ ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು ₹64 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಹಂತ ಹಂತವಾಗಿ ಶೀತಲಗೃಹಗಳನ್ನು ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ.
ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!
ತೋಟಗಾರಿಕೆಯನ್ನು ರೈತರ ಆದಾಯ ಹೆಚ್ಚಿಸುವ ಪ್ರಮುಖ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ಗುರಿ ಸರ್ಕಾರ ಹೊಂದಿದೆ. ಉತ್ತಮ ಗುಣಮಟ್ಟದ, ಅಧಿಕ ಮೌಲ್ಯದ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 89,000 ಹೆಕ್ಟೇರ್ ಪ್ರದೇಶದಲ್ಲಿ ಹೊಸ ತೋಟಗಾರಿಕೆ ಬೆಳೆಗಳನ್ನು ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಇದೇ ಅವಧಿಯಲ್ಲಿ 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಕೆಯಾಗಿದ್ದು, 2.36 ಲಕ್ಷ ರೈತರಿಗೆ ಇದರ ಪ್ರಯೋಜನ ದೊರೆತಿದೆ. ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ ಒಟ್ಟು ₹2,378 ಕೋಟಿ ಪರಿಹಾರ ನೀಡಲಾಗಿದೆ. ಜೊತೆಗೆ 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳನ್ನು ನಿರ್ಮಿಸಲು ಸಹಾಯ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆ ಉಳಿತಾಯದ ಜೊತೆಗೆ ಭರ್ಜರಿ ಲಾಭ; ಹೆಣ್ಣು ಮಕ್ಕಳ ಭವಿಷ್ಯಕ್ಕೆ ಬಲ, ಸಣ್ಣ ಹೂಡಿಕೆ, ದೊಡ್ಡ ಭವಿಷ್ಯ
ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿರುವ ಲಭ್ಯ ಜಮೀನನ್ನು ಬಳಸಿಕೊಂಡು ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (PPP) ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Yellow Leaf Disease: )
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ



























