ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ಭಾನುವಾರ ನಡೆದಿದೆ.
ಬೆಂಗಳೂರು ಜೆಪಿ ನಗರದ ಪರೋಸ್ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಮಾಡಿದ್ದಾನೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿ ಇದೆ. ಇಲ್ಲಿನ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ನಡೆಸಬೇಕಾಗಿದೆ.
ಈಗಾಗಲೇ ಬಾಳೂರು ಪೊಲೀಸರು ಭಂಡಾಜೆ ಫಾಲ್ಸ್ ನ ತಮ್ಮ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಡಾಜೆ ಫಾಲ್ಸ್ ನ ತಳ ಹಾಗೂ ಇತರ ಕೆಲವುಭಾಗಗಳು ದಕ ಜಿಲ್ಲೆ ವ್ಯಾಪ್ತಿಯಲ್ಲಿದ್ದು ಇಲ್ಲಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಹುಡುಕಾಟ ಮುಂದುವರಿಸಿದ್ದಾರೆ.
ಪ್ರದೇಶವು ಸಂಪೂರ್ಣ ಕತ್ತಲ ಪರಿಸರ ಹಾಗೂ ಕಾಡಾನೆ ಸಹಿತ ಇತರ ವನ್ಯಜೀವಿಗಳು ಸಂಚರಿಸುವ ಸ್ಥಳವಾಗಿದ್ದು ಹಲವು ರೀತಿಯ ಅಪಾಯಗಳ ಮಧ್ಯೆ ಹುಡುಕಾಟ ನಡೆಸುವ ಅನಿವಾರ್ಯತೆ ಇದೆ. ಆಗಾಗ ಮೊಬೈಲ್ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿದ್ದು ಹುಡುಕಾಟ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಬೈಕ್ ಅಪಘಾತದಲ್ಲಿ ಯೋಧನ ಸಾವು ಪ್ರಕರಣ; ಪೊಲೀಸರಿಗೆ ತಾಯಿ ಪ್ರಶ್ನೆ
ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಯೋಧ ಮೃತಪಟ್ಟಿರುವ ಘಟನೆ ಬುಧವಾರ ಬೆಳಗಿನಜಾವ ರಾಷ್ಟ್ರೀಯ ಹೆದ್ದಾರಿ 75ರ ಹೇಮಾವತಿ ಕ್ರಾಸ್ ಬಳಿ ನಡೆದಿತ್ತು.
ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲ್ಲೂಕಿನ ಜೈಪುರ ಗ್ರಾಮದ ದೀಪಕ್ (31) ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದು, ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹೇಮಾವತಿ ಕ್ರಾಸ್ ಬಳಿ ಬೈಕ್ ಅಪಘತದಲ್ಲಿ ದೀಪಕ್ ಮೃತ ಪಟ್ಟಿದ್ದರು.
ಮೃತ ದೀಪಕ್ ಗೆ ಸೇನೆಯ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಆದರೆ ಅಪಘಾತದಲ್ಲಿ ಸಾವನ್ನಪ್ಪಿದರು ಅನ್ನೋದು ಹೇಗೆ, ಯಾವ ವಾಹನ ಅನ್ನೋದು ಇಂದಿಗೂ ನಿಗೂಢವಾಗಿದೆ. ಆದರೆ, ಮೃತ ಪೋಷಕರು ಮೂರು ವಸ್ತುಗಳಾಗಿ ಮನವಿ ಮಾಡುತ್ತಿದ್ದಾರೆ.
ಆತನ ಮೊಬೈಲ್, ವಾಚ್, ಹೆಲ್ಮೇಟ್ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮೊಬೈಲ್ ನಲ್ಲಿ ಆರ್ಮಿಯ ಸೀಕ್ರೇಟ್ ಕೋಡ್ ಇದೆ ಎಂದು ಹೇಳುತ್ತಿದ್ದ, ಹೆಲ್ಮೆಟ್ ನಲ್ಲಿ ಕ್ಯಾಮರಾ ಇದೆ. ಅವನ ಸಾವಿಗೆ ಕಾರಣವಾದ್ರು ಗೊತ್ತಾಗಬಹುದು. ದಯವಿಟ್ಟು ಹೆಲ್ಮೇಟ್ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಬೈಕಿಗೆ ಅಪಘಾತ ಮಾಡಿದ ಲಾರಿಯವನು ಮೊಬೈಲ್ ತೆಗೆದುಕೊಂಡು ಹೋಗಿದ್ದಾನೆ. ಮನೆಯವರು ಫೋನ್ ಮಾಡಿದಾಗ ಲಾರಿ ಚಾಲಕನೇ ಅಪಘಾತವಾಗಿದೆ, ಆಸ್ಪತ್ರೆಗೆ ಬನ್ನಿ ಎಂದಿದ್ದಾನೆ. ದೀಪಕ್ ಸ್ನೇಹಿತ ಫೋನ್ ಮಾಡಿದಾಗಲು ಲಾರಿ ಚಾಲಕ ಗುದ್ದಿದ್ದೇನೆ, ಗಾಬರಿ ಆಯ್ತು ಅದಕ್ಕೆ ಬಂದುಬಿಟ್ಟೆ ಆಸ್ಪತ್ರೆಗೆ ಹೋಗಿ ಎಂದಿದ್ದಾನೆ. ಪೊಲೀಸರು ಫೋನ್ ಮಾಡಿದಾಗಲು ನೆಲಮಂಗಲದಲ್ಲಿ ಇದ್ದೇನೆ ಬಂದು ಫೋನ್ ತೆಗೆದುಕೊಂಡು ಹೋಗಿ ಎಂದನಂತೆ. ಪೊಲೀಸರು ಲೊಕೇಶನ್ ಆಧಾರದ ಮೇಲೆ ಅವನನ್ನ ಹಿಡಿಯಬಹುದಿತ್ತು. ಇನ್ನೂ ಹಿಡಿದಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.