Wednesday, November 29, 2023
Homeರಾಜಕೀಯ"ಷಡ್ಯಂತ್ರದಿಂದ ಮುಸ್ಲಿಂ ಪ್ರಬಲನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ " - ಜಮೀರ್ ಅಹ್ಮದ್ ಖಾನ್

“ಷಡ್ಯಂತ್ರದಿಂದ ಮುಸ್ಲಿಂ ಪ್ರಬಲನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ” – ಜಮೀರ್ ಅಹ್ಮದ್ ಖಾನ್

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಮಾನಸಿಕವಾಗಿ ಕಿರುಕುಳವನ್ನು ನೀಡುವ ಪ್ರಯತ್ನವು ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿಯ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಈ ಸಂಬoಧ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನರು ತಲೆತಗ್ಗಿಸುವಂತ ಯಾವ ಕೆಲಸವನ್ನೂ ನಾನು ಮಾಡುವುದಿಲ್ಲ. ನನಗೆ ಇರುವಂತಹ ಆಸ್ತಿಯೂ ಅವರೇ. ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ ಎಂದು ಹೇಳಿದ್ದಾರೆ.

ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬoತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದು ತಿಳಿಸಿದ್ದಾರೆ.

Most Popular

Recent Comments