Zero Interest Loan: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಯಂತಹ ಹಲವು ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ಬಂದಿವೆ. ಹಳೆಯ ಕೆಲವು ಸರ್ಕಾರಿ ಯೋಜನೆಗಳಲ್ಲಿ ಹೊಸ ಮಾರ್ಪಾಡು ಕೂಡ ಮಾಡಲಾಗಿದೆ. ಈ ಪೈಕಿ ರೈತರಿಗೆ ನೀಡುವ ಶೂನ್ಯ ಬಡ್ಡಿ ಸಾಲದ ಮಿತಿಯನ್ನು 3 ಲಕ್ಷ ದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ.
ಇದನ್ನೂ ಓದಿ; ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಈಗಾಗಲೇ ರೈತರಿಗೆ ಡಿಸಿಸಿ ಬ್ಯಾಂಕಿನಿಂದ ಶೂನ್ಯ ಬಡ್ಡಿದರದಲ್ಲಿ ೩ ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ ಸಿಗಲಿದೆ. ಈ ಮಿತಿಯನ್ನು 2023-24ನೇ ಸಾಲಿನ ಬಜೆಟ್‌ನಲ್ಲಿ 5 ಲಕ್ಷ ರೂಪಾಯಿಗೆ ಹೆಚ್ಚಿ ಸಲಾಗಿದ್ದು, ಈಚೆಗೆ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲೂ ಇದು ಪ್ರಮುಖಾಂಶವಾಗಿದೆ.
ಇದನ್ನೂ ಓದಿ; ಮೂಡಿಗೆರೆ: ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
ಸಾಲ ಪಡೆಯಲು ಯಾರು ಅರ್ಹರು?:
* ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಎಲ್ಲಾ ರೈತರಿಗೆ ಈ ಸಾಲ ಸಿಗುವುದಿಲ್ಲ. ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ಸದಸ್ಯತ್ವ ಹೊಂದಿದ್ದರೆ ಮಾತ್ರ ಅವರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದೆ. ರೈತರು ಬೇರೆ ಕಡೆ ಸಾಲ ಪಡೆದಿರಬಾರದು.
* ಎರಡು ಸಂಘಗಳ ಕಾರ್ಯ ವ್ಯಾಪ್ತಿಯಲ್ಲಿ ಬೇರೆ ಬೇರೆ ಭೂಮಿ ಹೊಂದಿದ್ದರೆ ಅಥವಾ ಭೂಮಿ ಮತ್ತು ವಾಸಸ್ಥಳ ವಿವಿಧ ಸಂಘದ ವ್ಯಾಪ್ತಿಯಲ್ಲಿದ್ದರೆ ಯಾವ ಸಂಘದ ವ್ಯಾಪ್ತಿಯಲ್ಲಿ ವಾಸವಿರುತ್ತಾನೆಯೋ ಆ ಸಂಘದಲ್ಲಿ ಪಡೆದ ಸಾಲಗಳಿಗೆ ಮಾತ್ರ ಬಡ್ಡಿ ಸಹಾಯಧನ ಅನ್ವಯವಾಗುತ್ತದೆ.
* ಒಂದು ವೇಳೆ ರೈತನು ವಾಸಿಸುತ್ತಿರುವ ಪ್ರದೇಶದಲ್ಲಿ ಸಂಘವು ಇಲ್ಲದಿದ್ದರೆ ಅಥವಾ ಸಾಲ ನೀಡಲು ಸಂಘವು ಸಶಕ್ತರಾಗಿಲ್ಲದಿದ್ದರೆ ಅಂತಹ ಸಂಘದಿಂದ ನಿರಪೇಕ್ಷಣಾ ಪತ್ರ ಪಡೆದು ಸಂಬಂಧಿಸಿದ ಡಿಸಿಸಿ ಬ್ಯಾಂಕುಗಳ ಶಾಖೆಗಳಲ್ಲಿ ಸಾಲ ಪಡೆಯಬಹುದು.
* ರೈತ ನೆರೆ ರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದಲ್ಲಿ ಭೂಮಿ ಇದ್ದರೆ ಅಂತಹ ರೈತರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಂದಿನಿ ಹಾಲಿನ ಪ್ರಮಾಣ ತಗ್ಗಿಸಿಲ್ಲ; 10 ಎಂಎಲ್ ಹೆಚ್ಚಿಸಿದ್ದೇವೆ; ಕೆ.ಎಂ.ಎಫ್ ಅಧಿಕಾರಿಗಳಿಂದ ಸ್ಪಷ್ಟನೆ
- ಚಿಕ್ಕಮಗಳೂರು: ಗಾಂಜಾ ಸೇವನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬಂಧನ
- ಯೂಟ್ಯೂಬ್ ನಲ್ಲಿ ಅಶ್ಲೀಲ ವಿಡಿಯೋಗಳು ಕಾಣಿಸುತ್ತಿವೆಯಾ?; ತಡೆಯುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
Zero Interest Loan: ಯಾವುದೆಲ್ಲಾ ದಾಖಲೆಗಳು ಬೇಕು?:
* ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಿಕಾರ್ಡ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ಸದಸ್ಯತ್ವ ಹೊಂದಿರಬೇಕು.
* ಪಹಣಿ
* ಆಧಾರ್ ಕಾರ್ಡ್
* ಯಾವ ಬ್ಯಾಂಕಿನಿಂದ ಸಾಲ ಪಡೆಯಲಿಚ್ಚಿಸುತ್ತಾರೋ ಅಲ್ಲಿಂದ ಅರ್ಜಿ ಪಡೆದುಕೊಳ್ಳಬೇಕು.
* ಬ್ಯಾಂಕ್ ಪಾಸ್ ಬುಕ್
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಹೊಂದಿರಬೇಕು.
ಇದನ್ನೂ ಓದಿ; ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ; ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಆಗಿದ್ದ ಲೋಕೇಶ್
ಯಾವೆಲ್ಲಾ ಬ್ಯಾಂಕುಗಳು ಸಾಲ ನೀಡುತ್ತದೆ?:
ರೈತರ ಕೃಷಿ ಚಟುವಟಿಕೆಗೆ ನೆರವಾಗಲೆಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತವೆ.
ಇದನ್ನೂ ಓದಿ; ಮೂಡಿಗೆರೆ: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶ






Leave a Reply